ಶಿವಮೊಗ್ಗ: ಲೋಕಸಭಾ ಚುನಾವಣೆ ನ್ನೆಲೆಯಲ್ಲಿ ಚುನಾವಣಾ ಕಾರ್ಯಗಳಲ್ಲಿ 18ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ಎಲ್ಲಾ ರಾಜಕೀಯ ಪಕ್ಷಗಳಿಗೆ ತಿಳಿಸಿದ್ದಾರೆ.
18ವರ್ಷದೊಳಗಿನ ಎಲ್ಲರನ್ನೂ ಮಕ್ಕಳು ಎಂದು ಪರಿಗಣಿಸಲಾಗಿದ್ದು ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರ ಹಾಗೂ ಇನ್ನಿತರ ಕಾರ್ಯಗಳಿಗೆ ಬಳಸಿಕೊಂಡಲ್ಲಿ ಅವರನ್ನು ಬಳಸಿಕೊಳ್ಳದಂತೆ ಎಚ್ಚರಿಕೆ ವಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಆದೇಶಿಸಿದೆ. ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಅಪಾಯಕಾರಿಯಾದ ಕ್ಷೇತ್ರಗಳಲ್ಲಿ ಕಾರ್ಯನಿರ್ವಸದಂತೆ ಹಾಗೂ ಮಕ್ಕಳ ಬೆಳವಣಿಗೆಗೆ ತೊಡಕುಂಟು ಮಾಡುವ ಯಾವುದೇ ಚಟುವಟಿಕೆಗಳಲ್ಲಿ ಭಾಗವಸದಂತೆ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶಿಸಿದೆ.
ಈ ನ್ನೆಲೆಯಲ್ಲಿ ಮಕ್ಕಳನ್ನು ಚುನಾವಣಾ ಕಾರ್ಯಗಳಿಗೆ ಬಳಸಿಕೊಂಡಲ್ಲಿ ಅಂತಹ ಪಕ್ಷ, ಅಭ್ಯರ್ಥಿಗಳ ರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.
Discussion about this post