ಶಿವಮೊಗ್ಗ: ಲೋಕಸಭಾ ಚುನಾವಣೆಯ ಜೆಡಿಎಸ್-ಕಾಂಗ್ರೆಸ ಮೈತ್ರಿ ಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ತಮ್ಮ ಬಿಡುವಿಲ್ಲದ ಪ್ರಚಾರದ ಪಯಣವನ್ನು ಇಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆಸಿದರು.
ಬಸವನಗುಡಿ, ಟ್ಯಾಂಕ್ ಮೊಹಲ್ಲಾ, ಬಾಪೂಜಿನಗರ ವಾರ್ಡ್’ಗಳ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯನ್ನು ಬಂಜಾರ ಸಮುದಾಯದ ಸಭಾಂಗಣದಲ್ಲಿ ಆಯೋಜಿಸಿದ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಎಂ. ಶ್ರೀಕಾಂತ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್, ಪಾಲಿಕೆ ಸದಸ್ಯ ರಮೇಶ್ ಹೆಗ್ಗಡೆ, ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ಖಾನ್ ಹಾಗೂ ಜೆಡಿಎಸ್ ಕಾಂಗ್ರೆಸ್ ಮುಖಂಡರು, ವಾರ್ಡ್ ಅಧ್ಯಕ್ಷರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಮೋದ್ ಮಧ್ವರಾಜ್’ಗೆ ಮಧು ಸಾಥ್
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಪ್ರಮೋದ್ ಮಧ್ವರಾಜ್ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹಾಗೂ ರಾಜ್ಯ ಯುವ ಜೆಡಿಎಸ್ ಅಧ್ಯಕ್ಷ ಮಧು ಬಂಗಾರಪ್ಪ ಉಪಸ್ಥಿತರಿದ್ದು ಶುಭ ಹಾರೈಸಿದರು.
Discussion about this post