ಹಾಸನ: ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್. ಪುಟ್ಟರಾಜು ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿರುವ ಬೆನ್ನಲ್ಲೇ, ಇತ್ತ ಹಾಸನದಲ್ಲಿ ಎಚ್.ಡಿ. ರೇವಣ್ಣ ಅವರ ಆಪ್ತರ ನಿವಾಸ ಹಾಗೂ ಕಚೇರಿಗಳ ಮೇಲೂ ಸಹ ದಾಳಿ ನಡೆದಿದೆ.
ರೇವಣ್ಣ ಅವರ ಆಪ್ತರಿಗೆ ಸೇರಿದೆ ಎನ್ನಲಾಗಿರುವ 10ಕ್ಕೂ ಹೆಚ್ಚು ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆದಿದೆ.
ರೇವಣ್ಣ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಗುತ್ತಿಗೆದಾರರಾದ ನಾರಾಯಣ ರೆಡ್ಡಿ, ಅಶ್ವತ್ಥ್, ರಾಯಗೌಡ ಅವರ ಹಾಸನದ ಮನೆಗಳ ಮೇಲೆ ದಾಳಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅವರ ಮನೆಗಳು ಮಾತ್ರವಲ್ಲದೇ ಅವರ ಬೆಂಬಲಿಗರ ಮನೆಗಳ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Discussion about this post