ಕಲಬುರಗಿ: ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ರಾಜ್ಯದಲ್ಲಿ 22 ಹಾಗೂ ದೇಶದಲ್ಲಿ 300 ಸ್ಥಾನಗಳ ಗೆಲುವು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.
ಕಲಬುರಗಿಯಲ್ಲಿ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದರು.
ಸುಮಲತಾ ಕುರಿತು ಜಾತಿ ರಾಜಕಾರಣವನ್ನು ಜೆಡಿಎಸ್’ನವರು ಮಾಡುತ್ತಿದ್ದು, ಅಲ್ಲಿನ ಎಲ್ಲರೂ ಸಹ ಹಗುರವಾಗಿ ಮಾತುಗಳನ್ನು ಆಡುತ್ತಿದ್ದಾರೆ ಎಂದು ಕಿಡಿ ಕಾರಿದರು.
ಜೆಡಿಎಸ್ ನಾಯಕರ ವರ್ತನೆಯಿಂದ ಬೇಸತ್ತಿರುವ ಜನತೆ ಇದೀಗ ಜೆಡಿಎಸ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಹೀಗಾಗಿ, ಮಂಡ್ಯದಲ್ಲಿ 100ಕ್ಕೆ 100ರಷ್ಟು ಸುಮಲತಾ ಗೆಲುವು ಕಟ್ಟಿಟ್ಟ ಬುತ್ತಿ ಎಂದರು.
Discussion about this post