ಸೊರಬ: ಲೋಕಸಭಾ ಚುನಾವಣೆಗೆ ಶಿವಮೊಗ್ಗದಿಂದ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಧು ಬಂಗಾರಪ್ಪ ನಿನ್ನೆ ಸ್ವಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ನಡೆಸಿದರು.
ಸೊರಬ ವಿಧಾನಸಭಾ ಕ್ಷೇತ್ರದ ಮೂಡಿ ಗ್ರಾಮದಲ್ಲಿ ಮತಪ್ರಚಾರ ನಡೆಸಿದ ಮಧು ಅವರಿಗೆ ಅದ್ದೂರಿ ಸ್ವಾಗತ ಕೋರಲಾಯಿತು. ಈ ವೇಳೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ, ಕುಮಾರಸ್ವಾಮಿ ಹಾಗೂ ದೇವೇಗೌಡರಿಗೆ ಜನತೆ ಜೈಕಾರ ಹಾಕಿದ್ದು ಕಂಡುಬಂತು.
ಮತಪ್ರಚಾರದಲ್ಲಿ ಜಿಲ್ಲಾಪಂಚಾಯತ್ ಸದಸ್ಯ ವೀರೇಶ ಕೊಠಗಿ, ತಾಲೂಕು ಪಂಚಾಯತ್ ಸದಸ್ಯ ನರೇಂದ್ರ ಒಡೆಯರ್, ಕಾಂಗ್ರೆಸ್ ಸದಸ್ಯರು ಸಿದ್ದಪ್ಪ ಸೇರಿದಂತೆ ಹಲವು ಮುಖಂಡರು ಸಾಥ್ ನೀಡಿದ್ದರು.
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹರಿಗೆ ಹಾಗೂ ಸೂಳೆ ಬೈಲಿನಲ್ಲಿ ಜೆಡಿಎಸ್ ಕಾಂಗ್ರೆಸ್ ಮುಖಂಡರ ಹಾಗು ಕಾರ್ಯಕರ್ತರ ಬೃಹತ್ ಜಂಟಿ ಸಭೆಯನ್ನು ಉದ್ದೇಶಿಸಿ ಮೈತ್ರಿ ಕೂಟದ ಲೋಕಸಭಾ ಅಭ್ಯರ್ಥಿ ಮಧು ಬಂಗಾರಪ್ಪ ಪ್ರಚಾರ ನಡೆಸಿದರು.
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಟಿಪ್ಪೂನಗರದಲ್ಲಿ ಜೆಡಿಎಸ್ ಕಾಂಗ್ರೆಸ್ ಮುಖಂಡರ ಹಾಗೂ ಕಾರ್ಯಕರ್ತರ ಬೃಹತ್ ಜಂಟಿ ಸಭೆಯನ್ನು ಉದ್ದೇಶಿಸಿ ಮಧು ಬಂಗಾರಪ್ಪ ಮಾತನಾಡಿದರು. ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್, ಎಂಎಲ್’ಸಿ ಆರ್. ಪ್ರಸನ್ನಕುಮಾರ್ ಇದ್ದರು.
Discussion about this post