ಚಿತ್ರದುರ್ಗ: ಹಿರಿಯೂರು ಬಳಿಯಲ್ಲಿ ಇಂದು ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಬಲಿಯಾಗಿರುವ ಘಟನೆ ನಡೆದಿದೆ.
ಭದ್ರಾವತಿಯಿಂದ ಬೆಂಗಳೂರಿಗೆ 9 ಜನರು ಕಾರಿನಲ್ಲಿ ಬರುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಹಿರಿಯೂರು ಬಳಿ ಭೀಕರ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್’ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಐವರು ಮೃತಪಟ್ಟಿದ್ದು ಇನ್ನು ನಾಲ್ವರ ಪರಿಸ್ಥಿತಿ ಗಂಭೀರವಾಗಿದ್ದಾರೆ. ಗಾಯಾಳುಗಳನ್ನು ಹಿರಿಯೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

















