Read - < 1 minute
ನವದೆಹಲಿ: ಲೋಕಸಭಾ ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನೋಟೀಸ್ ಜಾರಿ ಮಾಡಿದೆ.
ಈ ಕುರಿತಂತೆ ವರದಿಯಾಗಿದ್ದು, ವೀಡಿಯೋದಲ್ಲಿ ಮಕ್ಕಳು ಅವಹೇಳನಕಾರಿ ಪದಗಳನ್ನು ಬಳಸುತ್ತಿದ್ದು, ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳಲಾಗಿದೆ ಎಂದು ಆರೋಪಿಸಿ ನೋಟೀಸ್ ಜಾರಿ ಮಾಡಿದೆ. ಅಲ್ಲದೆ, ಮೂರು ದಿನಗಳಲ್ಲಿ ಇದಕ್ಕೆ ಉತ್ತರಿಸುವಂತೆ ಪ್ರಿಯಾಂಕಾಗೆ ಸೂಚನೆ ನೀಡಿದೆ.
Discussion about this post