ಹುಬ್ಬಳ್ಳಿ: ರಾಜ್ಯ ಸರ್ಕಾರದ ಕಿರುಕುಳದಿಂದಲೇ ಮಾಜಿ ಸಚಿವ ಸಿ.ಎಸ್. ಶಿವಳ್ಳಿ ಅವರು ಸಾವನ್ನಪ್ಪಿದ್ದಾರೆ ಎಂದು ಬಿಜೆಪಿ ಶಾಸಕ ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದಾರೆ.
ಬೆಟದೂರಿನಲ್ಲಿ ಮಾತನಾಡಿದ ಅವರು, ಸಚಿವರಾಗಿದ್ದ ಶಿವಳ್ಳಿ ಅವರು ಈಗ ನಮ್ಮ ನಡುವೆ ಇಲ್ಲ. ಅವರ ಸಾವಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರವೇ ಕಾರಣ. ಮೈತ್ರಿ ಸರ್ಕಾರದ ಕಿರುಕುಳದಿಂದಲೇ ಶಿವಳ್ಳಿ ಮೃತಟ್ಟಿದ್ದಾರೆ. ಇದಕ್ಕೆ ಕುಂದಗೋಳ ಜನರಿಗೆ ಸರ್ಕಾರದ ವಿರುದ್ದ ಸೇಡು ತಿರುಸಿಕೊಳ್ಳುವ ಸಮಯ ಬಂದಿದೆ ಎಂದಿದ್ದಾರೆ.
ಇನ್ನು ಯಡಿಯೂರಪ್ಪ ಅವರ ಕುರಿತು ಮಾತನಾಡಿರುವ ಅವರು, ಯಡಿಯೂರಪ್ಪ ಅವರಿಗೆ ನಾಟಕ ಮಾಡುವುದು ಗೊತ್ತಿಲ್ಲ. ಅವರು ಸ್ವಲ್ಪ ಸಿಡುಕಿನ ಸ್ವಭಾವದವರು. ತಾವು ಎಂದು ಯಡಿಯೂರಪ್ಪ ಅವರ ಬಗ್ಗೆ ಟೀಕೆ ಮಾಡಿಲ್ಲ. ಈ ಹಿಂದೆ ಯಡಿಯೂರಪ್ಪ ಅವರ ಬಳಿಕ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ ಆಗಬೇಕು ಎಂದು ಬಯಸಿದ್ದೆ. ರಾಜಕೀಯ ಅಸ್ತಿತ್ವದ ಪ್ರಶ್ನೆಯಿಂದಾಗಿ ಪ್ರತ್ಯೇಕ ಪಕ್ಷ ಕಟ್ಟಿದ್ದೆ ಎಂದಿದ್ದಾರೆ.
Discussion about this post