ಭದ್ರಾವತಿ: ನಗರದ ಮಿಲ್ಟ್ರಿಕ್ಯಾಂಪ್‍ನ ಶ್ರೀ ಶ್ರೀನಿವಾಸ ಸ್ವಾಮಿ ದೇವಾಲಯದಲ್ಲಿ ಶ್ರೀ ಶ್ರೀನಿವಾಸ ಸ್ವಾಮಿ ಹಾಗು ಪದ್ಮಾವತಿ ಅಮ್ಮನವರ ಕಲ್ಯಾಣ ಮಹೋತ್ಸವ ಹಾಗು ಶ್ರೀ ನೀಲಕಂಠೇಶ್ವರ ಸ್ವಾಮಿಯ 7 ನೇ ವಾರ್ಷಿಕೋತ್ಸವ ನಡೆಯಿತು.
ದೇವಾಲಯದ ಮುಖ್ಯ ಅರ್ಚಕ ರವಿಕುಮಾರ್ ನೇತೃತ್ವದಲ್ಲಿ ಪುರೋಹಿತರ ತಂಡ ಧಾರ್ಮಿಕ ವಿ ವಿಧಾನಗಳನ್ನು ನೆರವೇರಿಸಿದರು. ನಂತರ ಉತ್ಸವ ಮೂರ್ತಿಯನ್ನು ಹೊತ್ತು ತಂದು ಭಕ್ತರ ದರ್ಶನಕ್ಕೆ ಅನುವು ಮಾಡಿಕೊಟ್ಟರು.
ಈ ಸಂದರ್ಭದಲ್ಲಿ ಡಿವೈಎಸ್‍ಪಿ ಓಂಕಾರನಾಯ್ಕ, ಸರ್ಕಲ್ ಇನ್ಸ್‍ಪೆಕ್ಟರ್‍ಗಳಾದ ರಂಗನಾಥ್, ಯೋಗೀಶ್, ಸಬ್‍ಇನ್ಸ್‍ಪೆಕ್ಟರ್ ಭರತ್‍ಕುಮಾರ್, ಸುರೇಶ್ ಹಾಗು ನೀರಾವರಿ ಇಲಾಖಾಕಾರಿಗಳು ಸೇರಿದಂತೆ ನೂರಾರು ಭಕ್ತರು ಪಾಲ್ಗೊಂಡು ತಮ್ಮ ಇಷ್ಟಾರ್ಥಗಳನ್ನು ಪೂರೈಸಿಕೊಂಡರು.
(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)
Discussion about this post