ಮೈಸೂರು: ವಿವಾದಾತ್ಮಕ ಸಾಹಿತಿ ಕೆ.ಎಸ್. ಭಗವಾನ್ ಅವರು ಇಂದು ಸಂಜೆ ವಾಕಿಂಗ್ ಮಾಡುವಾಗ ಅಸ್ವಸ್ಥರಾಗಿ ಕುಸಿದುಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಸಂಜೆ ಮೈಸೂರಿನ ಕುವೆಂಪು ನಗರದ ನಿವಾಸದ ಬಳಿ ವಾಕಿಂಗ್ ಮಾಡುವಾಗ ಭಗವಾನ್ ಕುಸಿದು ಬಿದ್ದಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತಂತೆ ಆಸ್ಪತ್ರೆ ಮೂಲಗಳು ಮಾಹಿತಿ ಪ್ರಕಟಿಸಿದ್ದು, ಆಸ್ಪತ್ರೆಗೆ ದಾಖಲಿಸುವಾಗ ಅವರ ಹೃದಯ ಬಡಿತ ಕ್ಷೀಣವಾಗಿತ್ತು. ಆದರೆ, ಈಗ ಚಿಕಿತ್ಸೆ ನೀಡಿದ ಹಿನ್ನೆಲೆಯಲ್ಲಿ ಅವರ ಆರೋಗ್ಯ ಸ್ಥಿರವಾಗಿದೆ ಎಂದಿದ್ದಾರೆ.















