No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Wednesday, June 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಬೆಳೆ ನಷ್ಟ ಸಂತ್ರಸ್ತ ರೈತರಿಗೆ ಸಕಾಲದಲ್ಲಿ ಪರಿಹಾರ ನೀಡಿ: ಸಚಿವ ದೇಶಪಾಂಡೆ ಸೂಚನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 22, 2019
in Small Bytes, ಶಿವಮೊಗ್ಗ
0
ಬೆಳೆ ನಷ್ಟ ಸಂತ್ರಸ್ತ ರೈತರಿಗೆ ಸಕಾಲದಲ್ಲಿ ಪರಿಹಾರ ನೀಡಿ: ಸಚಿವ ದೇಶಪಾಂಡೆ ಸೂಚನೆ
Share on FacebookShare on TwitterShare on WhatsApp

ಶಿವಮೊಗ್ಗ: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು, ಉದ್ಯೋಗ ಸೃಜನೆ, ಮೇವಿನ ಕೊರತೆಯಾಗದಂತೆ ಎಲ್ಲಾ ಕ್ರಮಗಳನ್ನು ಆದ್ಯತೆ ಮೇಲೆ ಕೈಗೊಳ್ಳುವುದರ ಜೊತೆಗೆ ಬೆಳೆ ನಷ್ಟ ಸಂತ್ರಸ್ತ ರೈತರ ಪರಿಹಾರ ಹಣವನ್ನು ಕೂಡಲೇ ಪಾವತಿಸುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ.

ಈ ಕುರಿತಂತೆ ಅಧಿಕಾರಿಗಳಿಗೆ ಅಧಿಕೃತ ಪ್ರಕಟಣೆ ಹೊರಡಿಸಿರುವ ಅವರು, ಜನ ಹಾಗೂ ಜಾನುವಾರುಗಳಿಗೆ ಯಾವುದೇ ಸಂದರ್ಭದಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ನಿಗಾ ವಹಿಸಿ ಎಂದು ಸೂಚಿಸಿದ್ದಾರೆ.

ಹೊಸ ಕೊಳವೆಬಾವಿಗಳನ್ನು ಕೊರೆಯುವ ಬದಲು ಖಾಸಗಿ ಕೊಳವೆಬಾವಿಗಳನ್ನು ಪಡೆಯಲು ಆದ್ಯತೆ ನೀಡುವಂತೆ ಸೂಚಿಸಿರುವ ಅವರು, ಕುಡಿಯುವ ನೀರಿನ ಬಾಕಿ ಬಿಲ್ಲನ್ನು ಪ್ರತಿ 15 ದಿನಗಳಿಗೊಮ್ಮೆ ಕಡ್ಡಾಯವಾಗಿ ಪಾವತಿಸಬೇಕು. ಕುಡಿಯುವ ನೀರಿನ ದುರುಪಯೋಗ ತಡೆಗಟ್ಟಲು ನೀರು ಸರಬರಾಜು ಟ್ಯಾಂಕರ್‌ಗಳಿಗೆ ಕಡ್ಡಾಯವಾಗಿ ಜಿಪಿಎಸ್ ಅಳವಡಿಸುವಂತೆ ಸೂಚಿಸಿದ್ದಾರೆ.

ಜಿಲ್ಲೆಗಳಲ್ಲಿ ಮೇವು ಬ್ಯಾಂಕ್ ತೆರೆಯಲು ಆದ್ಯತೆ ನೀಡುವಂತೆ ಸೂಚಿಸಿರುವ ಅವರು, ಸರ್ಕಾರೇತರ ಸಂಸ್ಥೆಗಳು ಗೋಶಾಲೆ ತೆರೆಯಲು ಮುಂದೆ ಬಂದಲ್ಲಿ ಪ್ರೋತ್ಸಾಹಿಸಬೇಕು. ಹಸಿರು ಮೇವು ಬೆಳೆಸುವ ಸಲುವಾಗಿ ವಿತರಿಸಿದ ಮಿತಿ ಕಿಟ್’ನ ಸಮರ್ಪಕ ಬಳಕೆ ಬಗ್ಗೆ ಪರಿಶೀಲಿಸಬೇಕು. ಜನ ಗುಳೆ ಹೋಗುವುದನ್ನು ತಪ್ಪಿಸುವ ಸಲುವಾಗಿ ಸೂಕ್ತ ಉದ್ಯೋಗ ಸೃಜನೆ, ಸಕಾಲಿಕ ವೇತನ ಪಾವತಿ ಸೇರಿದಂತೆ ಎಲ್ಲಾ ಪರಿಹಾರ ಕ್ರಮಗಳನ್ನು ಆದ್ಯತೆ ಮೇಲೆ ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಹಸಿರು ಮೇವಿನ ಖರೀದಿ ದರ ಪ್ರತಿ ಟನ್‌ಗೆ ಈಗಿರುವ ರೂ. 1,5000/- ರಿಂದ ರೂ. 3,000/-ಕ್ಕೆ ಹೆಚ್ಚಳ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮಕ್ಕೆ ಕುರಿ ಮತ್ತು ಮೇಕೆಗಳಿಗೆ ಜಂತುನಾಶಕ ಮತ್ತು ಲವಣ ಮಿಶ್ರಣ ಔಷಧಿ ಖರೀದಿಗಾಗಿ ರೂ. 5.00 ಕೋಟಿ ಅನುದಾನ, ಅಂತರಾಜ್ಯ ಮೇವು ಸಾಗಾಣಿಕೆಗೆ ಜುಲೈ 31 ರವರೆಗೆ ನಿಬಂಧ, ವಿಜಯಪುರ ಜಿಲ್ಲೆಗೆ ತುರ್ತು ಬರ ಪರಿಹಾರ ಕ್ರಮಗಳಿಗಾಗಿ ಎಸ್‌ಡಿಆರ್‌ಎಫ್, ನಿಧಿಯಿಂದ 10.00 ಕೋಟಿ ಅನುದಾನ ಬಿಡುಗಡೆ. ಬಾಗಲಕೋಟೆ ಜಿಲ್ಲೆಯಲ್ಲಿನ ಬ್ಯಾರೇಜ್ ಗೇಟ್ ನಿರ್ವಹಣೆಗಾಗಿ ಸಣ್ಣ ನೀರಾವರಿ ಇಲಾಖೆಯಿಂದ 15.00 ಲಕ್ಷ ಅನುದಾನ. ಬೆಳೆಹಾನಿ ಹೊಂದಿರುವ ಜಮೀನಿನ ರೈತರು ಮರಣ ಹೊಂದಿದ್ದಲ್ಲಿ, ಫಲಾನುಭವಿ ರೈತರ ಸಕ್ಷಮ ವಾರಸುದಾರರಿಗೆ ಹಾಗೂ ಜಮೀನು ಜಂಟಿ ಖಾತೆಯಿದ್ದಲ್ಲಿ, ತನಿಖೆ ನಡೆಸಿ ಅರ್ಹ ಫಲಾನುಭವಿ ರೈತರಿಗೆ ಇನ್‌ಪುಟ್ ಸಬ್ಸಿಡಿ ವಿತರಿಸುವ ಬಗ್ಗೆ ಸೂಕ್ತ ನಿರ್ಣಯ ತೆಗೆದುಕೊಳ್ಳಲು ಸಂಬಂಧಪಟ್ಟ ತಹಶೀಲ್ದಾರರಿಗೆ ಅಧಿಕಾರ ನೀಡಲಾಗಿದೆ ಎಂದವರು ತಿಳಿಸಿದ್ದಾರೆ.

ಅಲ್ಲದೇ 2018ರ ಮುಂಗಾರು ಹಂಗಾಮಿನಲ್ಲಿ ಬಿದ್ದ ಭಾರಿ ಮಳೆಯಿಂದಾಗಿ ಕೊಡಗು ಹಾಗೂ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಅಪಾರ ಹಾನಿಯಾಗಿರುವುದನ್ನು ಮನಗಂಡು ಈ ಬಾರಿ ಮುಂಗಾರು ಆರಂಭಕ್ಕೆ ಮುನ್ನವೇ ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 2 ಸುಸಜ್ಜಿತ ರಾಷ್ಟ್ರೀಯ ವಿಪತ್ತು ಸ್ಪಂದನ ಪಡೆಗಳನ್ನು ಮೇ 25 ರಿಂದಲೇ ನಿಯೋಜಿಸಲಾಗುವುದು ಎಂದವರು ತಿಳಿಸಿದರು.

ಹಾಗೂ ಕೃಷಿ ಇಲಾಖೆಯು ಬಿತ್ತನೆ ಬೀಜ, ಗೊಬ್ಬರಗಳನ್ನು ಸಾಕಷ್ಟು ದಾಸ್ತಾನು ಇಟ್ಟುಕೊಂಡು ಮುಂಬರುವ ಮುಂಗಾರು ಹಂಗಾಮಿನಲ್ಲಿ ರೈತರಿಗೆ ಸರಬರಾಜು ಮಾಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

(ವರದಿ: ಡಾ.ಸುಧೀಂದ್ರ, ಶಿವಮೊಗ್ಗ)

Tags: Crop lossFarmerKannada NewsMalnad NewsR V DeshapandeShivamoggaಆರ್.ವಿ. ದೇಶಪಾಂಡೆಶಿವಮೊಗ್ಗ
Share196Tweet123Send
Previous Post

ತುಮಕೂರು: ಪ್ರಸಾದ ಸೇವಿಸಿ ಬಾಲಕ ಸಾವು: 20ಕ್ಕೂ ಅಧಿಕ ಭಕ್ತರು ತೀವ್ರ ಅಸ್ವಸ್ಥ

Next Post

ನಾಳೆ ಶಿವಮೊಗ್ಗದಲ್ಲಿ ರಸ್ತೆ ಮಾರ್ಗ ಬದಲು: ಯಾವ ಮಾರ್ಗದಲ್ಲಿ ಸಂಚಾರ ನಿಷೇಧ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಾಳೆ ಶಿವಮೊಗ್ಗದಲ್ಲಿ ರಸ್ತೆ ಮಾರ್ಗ ಬದಲು: ಯಾವ ಮಾರ್ಗದಲ್ಲಿ ಸಂಚಾರ ನಿಷೇಧ? ಇಲ್ಲಿದೆ ಮಾಹಿತಿ

ನಾಳೆ ಶಿವಮೊಗ್ಗದಲ್ಲಿ ರಸ್ತೆ ಮಾರ್ಗ ಬದಲು: ಯಾವ ಮಾರ್ಗದಲ್ಲಿ ಸಂಚಾರ ನಿಷೇಧ? ಇಲ್ಲಿದೆ ಮಾಹಿತಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬೀದಿ ದೀಪಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ | ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ಶಾಸಕ ಚನ್ನಬಸಪ್ಪ ಎಚ್ಚರಿಕೆ

ಬೀದಿ ದೀಪಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ | ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ಶಾಸಕ ಚನ್ನಬಸಪ್ಪ ಎಚ್ಚರಿಕೆ

June 3, 2026
ನೂತನ ಸಂಪಟಕ್ಕೆ13 ಜನ ಸೇರ್ಪಡೆ | ಉಪಮುಖ್ಯಮಂತ್ರಿಯಾಗಿ ಪರಮೇಶ್ವರ್ ಪ್ರಮಾಣ ವಚನ ಸ್ವೀಕಾರ

ನೂತನ ಸಂಪಟಕ್ಕೆ13 ಜನ ಸೇರ್ಪಡೆ | ಉಪಮುಖ್ಯಮಂತ್ರಿಯಾಗಿ ಪರಮೇಶ್ವರ್ ಪ್ರಮಾಣ ವಚನ ಸ್ವೀಕಾರ

June 3, 2026
ಅಂದು ಸಮಸ್ಯೆ… ಇಂದು ಪರಿಹಾರ! ಅಭಿವೃದ್ಧಿಯ ಪಥದಲ್ಲಿ ಬೀದರ್ ದಕ್ಷಿಣ – ಜನರ ಕನಸುಗಳಿಗೆ ಶಾಶ್ವತ ಪರಿಹಾರ

ಅಂದು ಸಮಸ್ಯೆ… ಇಂದು ಪರಿಹಾರ! ಅಭಿವೃದ್ಧಿಯ ಪಥದಲ್ಲಿ ಬೀದರ್ ದಕ್ಷಿಣ – ಜನರ ಕನಸುಗಳಿಗೆ ಶಾಶ್ವತ ಪರಿಹಾರ

June 3, 2026
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Young Woman Dies of Cardiac Arrest; Parents Give New Life Through Organ Donation

June 3, 2026
ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ

June 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL