ನವದೆಹಲಿ: ನಮ್ಮ ದೇಶದಲ್ಲಿ ಜನರೇ ಮಾಲೀಕರು… ಅವರು ನೀಡಿರುವ ತೀರ್ಪನ್ನು ಗೌರವಿಸುತ್ತೇವೆ. ಇದೇ ವೇಳೆ ಪಕ್ಷದ ಸೋಲಿಗೆ ಕಾರಣವನ್ನು ಸಿಡಬ್ಲ್ಯೂಸಿ ಸಭೆಯಲ್ಲಿ ಚರ್ಚಿಸುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಿರುವ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಮಾಲೀಕರು. ಅವರು ನೀಡಿರುವ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ ಎಂದರು.
#WATCH live from Delhi: Congress President Rahul Gandhi addresses the media. #ElectionResults2019 https://t.co/rCRUWymSAz
— ANI (@ANI) May 23, 2019
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಎನ್’ಡಿಎಗೆ ಜನರ ಆರ್ಶೀವಾದ ಮಾಡಿದ್ದಾರೆ. ಇದಕ್ಕಾಗಿ ಬಿಜೆಪಿ ಹಾಗೂ ಮೋದಿಯವರನ್ನು ಅಭಿನಂದಿಸುತ್ತೇನೆ. ಇದೇ ವೇಳೆ ಕಾಂಗ್ರೆಸ್ ಪಕ್ಷದಲ್ಲಿ ಗೆಲುವು ಸಾಧಿಸಿರುವ ಅಭ್ಯರ್ಥಿಗಳಿಗಾಗಿ ಶ್ರಮಿಸಿದ ನಾಯಕರು ಹಾಗೂ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಇದೇ ವೇಳೆ ಅಮೇಥಿಯಲ್ಲಿ ತಾವು ಸೋಲನ್ನಪ್ಪಿರುವ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ರಾಹುಲ್, ಅಮೇಥಿ ಜನರ ಆದೇಶವನ್ನು ನಾನು ಒಪ್ಪಿಕೊಳ್ಳುತ್ತೇನೆ ಎಂದರು.
Discussion about this post