ಬೆಂಗಳೂರು: ರಾಜ್ಯ ಜೆಡಿಎಸ್-ಕಾಂಗ್ರೆಸ್ ಸರ್ಕಾರ ಡೋಲಾಯಮಾನ ಸ್ಥಿತಿಯಲ್ಲಿರುವ ಬೆನ್ನಲ್ಲೇ ರಾಜ್ಯ ಪೊಲೀಸರಿಗೆ ಶೇ.12.5ರಷ್ಟು ವೇತನ ಹೆಚ್ಚಳ ಮಾಡುವ ಮೂಲಕ ಆರಕ್ಷಕರಿಗೆ ಸಿಹಿ ಸುದ್ದಿ ನೀಡಿದೆ.
ಈ ಕುರಿತಂತೆ, ಪೊಲೀಸರ ವೇತನ ಪರಿಷ್ಕರಣೆ ಕುರಿತು ನೀಡಲಾಗಿರುವ ವರದಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಂಗಳವಾರ ಅಂಕಿತ ಹಾಕಿದ್ದಾರೆ.
ಶೇ. 30ಕ್ಕೆ ಬದಲಾಗಿ ಶೇ. 12.5 ರಷ್ಟು ವೇತನ ಹೆಚ್ಚಳಕ್ಕೆ ಸರ್ಕಾರ ಒಪ್ಪಿಗೆ ನೀಡಿದೆ. ವರದಿ ಜಾರಿಯಿಂದ ಸರ್ಕಾರದ ಮೇಲೆ 630 ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದ್ದು, ಆರ್ಥಿಕ ಹೊರೆಯನ್ನು ತಪ್ಪಿಸಲು ಮೂಲ ವರದಿಯಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಲಾಗಿದೆ.
ಇನ್ನು, ನಿವೃತ್ತಿಯಾಗಿರುವ ಪೊಲೀಸರಿಗೂ ಈ ಆದೇಶ ಅನ್ವಯವಾಗಿಲಿದೆ ಎಂದು ಉಲ್ಲೇಖಿಸಲಾಗಿದೆ.
2016 ಜೂನ್’ನಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವೇತನ ಪರಿಷ್ಕರಣೆ ಸಂಬಂಧ ಬೇಡಿಕೆ ಕೇಳಿಬಂದ ಹಿನ್ನೆಲೆಯಲ್ಲಿ ಈ ಸಂಬಂಧ ವರದಿ ಸಲ್ಲಿಸುವಂತೆ ಎಡಿಜಿಪಿ ರಾಘವೇಂದ್ರ ಔರಾದ್ಕರ್ ನೇತೃತ್ವದ ಸಮಿತಿ ರಚಿಸಿತ್ತು.
Discussion about this post