No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮನಮುಟ್ಟಿದ ಶಿವಮೊಗ್ಗ ಜಿಲ್ಲಾಧಿಕಾರಿಗಳ ಸ್ವತಂತ್ರೋತ್ಸವ ಸಂದೇಶದಲ್ಲೇನಿದೆ ಗೊತ್ತಾ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 15, 2019
in ಶಿವಮೊಗ್ಗ
0
ಮುಂದುವರೆದ ಮಳೆ: ಗುರುವಾರವೂ ಶಿವಮೊಗ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

File Image

Share on FacebookShare on TwitterShare on WhatsApp

ಶಿವಮೊಗ್ಗ: ದೇಶದಾದ್ಯಂತ 73ನೆಯ ಸ್ವತಂತ್ರೋತ್ಸವವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತಿದೆ.

ಇನ್ನೊಂದೆಡೆ ನೆರೆ ಹಾವಳಿಯಿಂದ ತತ್ತರಿಸಿರುವ ಜಿಲ್ಲೆಯಲ್ಲಿ ಸಂಕಟದ ನಡುವೆಯೇ ದೇಶದ ಹಬ್ಬವನ್ನು ಆಚರಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶ್ರೀ ಕೆ.ಬಿ. ಶಿವಕುಮಾರ್ ಅವರ ಜಿಲ್ಲೆಯ ಜನತೆಗೆ ಪ್ರಮುಖ ಸಂದೇಶದ ರವಾನಿಸಿದ್ದು, ಈ ವಿಚಾರಗಳು ಮನಮುಟ್ಟುವಂತಿದೆ.

ಜಿಲ್ಲಾಧಿಕಾರಿಗಳ ಸಂದೇಶದ ಯಥಾವತ್ ಹೀಗಿದೆ:

ಶಿವಮೊಗ್ಗ ಜಿಲ್ಲೆಯ ಸಮಸ್ತ ಜನತೆಗೆ ಸ್ವತಂತ್ರೋತ್ಸವ ದ ಶುಭಾಶಯಗಳು.

ಈ ಶುಭ ಸಮಾರಂಭದಲ್ಲಿ ಭಾಗವಹಿಸಿರುವ ಗೌರವಾನ್ವಿತ ಜನಪ್ರತಿನಿಧಿಗಳೇ, ಹಿರಿಯ ಸ್ವಾತಂತ್ರ್ಯ ಹೋರಾಟಗಾರರೇ, ಸಂಘ ಸಂಸ್ಥೆಗಳ ಪ್ರತಿನಿಧಿಗಳೇ, ಮಾಧ್ಯಮ ಪ್ರತಿನಿಧಿಗಳೇ, ವಿದ್ಯಾರ್ಥಿ ವಿದ್ಯಾರ್ಥಿನಿಯರೆ, ಶಿವಮೊಗ್ಗದ ಎಲ್ಲ ನಾಗರಿಕ ಬಂಧುಗಳೆ,

ಇಂದು ದೇಶದಾದ್ಯಂತ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು, ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಇಂದು ಬ್ರಿಟೀಷರಿಂದ ನಮ್ಮ ಮಹಾನ್ ದೇಶ ಸ್ವತಂತ್ರಗೊಂಡ ಶುಭ ದಿನ. ಈಸ್ಟ್‌ ಇಂಡಿಯಾ ಕಂಪೆನಿ ಹೆಸರಿನಲ್ಲಿ ದೇಶಕ್ಕೆ ಕಾಲಿರಿಸಿ, ನಂತರ ಇಡೀ ದೇಶವನ್ನೇ ಸ್ವಾಧೀನಪಡಿಸಿದ ಬ್ರಿಟೀಷರಿಂದ ಮುಕ್ತಿ ಪಡೆದ ಸುದಿನ. ಇಂದಿನ ದಿನವನ್ನು ದೇಶದ ಪ್ರತಿಯೊಬ್ಬ ಪ್ರಜೆಯು ಸಡಗರ, ಸಂಭ್ರಮದಿಂದ ಆಚರಿಸುತ್ತಿದ್ದಾನೆ.

ಈ ದೇಶವನ್ನು ಬ್ರಿಟೀಷರ ಆಡಳಿತದಿಂದ ಮುಕ್ತಿಗೊಳಿಸಲು, ಸಾವಿರಾರು ಭಾರತೀಯರು ತಮ್ಮ ತನು, ಮನ, ಧನ ತ್ಯಾಗ ಮಾಡಿದ್ದಾರೆ. ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಸಾವಿರಾರು ದೇಶಪ್ರೇಮಿಗಳ ಬಲಿದಾನವಿದೆ.

ಮಹಾತ್ಮಾ ಗಾಂಧಿ, ಜವಾಹರ ಲಾಲ್ ನೆಹರು, ಸರ್ದಾರ್ ವಲ್ಲಭಬಾಯಿ ಪಟೇಲ್, ಭಗತ್ ಸಿಂಗ್, ನೇತಾಜಿ ಸುಭಾಷ್ ಚಂದ್ರ ಬೋಸ್ ಸೇರಿದಂತೆ ಹಲವಾರು ಮಹಾನ್ ನಾಯಕರ ಪರಿಶ್ರಮದ ಫಲವಾಗಿ ನಾವಿಂದು ಸ್ವತಂತ್ರಗೊಂಡಿದ್ದೇವೆ. ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಎಲ್ಲವನ್ನೂ ತ್ಯಾಗ ಮಾಡಿದ ಎಲ್ಲರಿಗೂ, ಈ ಸಂದರ್ಭದಲ್ಲಿ ನನ್ನ ಪ್ರಣಾಮ ಸಲ್ಲಿಸ ಬಯಸುತ್ತೇನೆ.

ಶಿವಮೊಗ್ಗ ಸಾಂಸ್ಕೃತಿಕ ಮತ್ತು ಸಮಾಜವಾದಿ ಚಿಂತನೆಗಳ ನೆಲೆಗಟ್ಟಿನ ಜಿಲ್ಲೆಯಾಗಿದೆ. ಸಾಹಿತ್ಯ ಕ್ಷೇತ್ರದ ದಿಗ್ಗಜರಾದ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕುವೆಂಪು, ಯು.ಆರ್. ಅನಂತಮೂರ್ತಿ, ಜಿ.ಎಸ್. ಶಿವರುದ್ರಪ್ಪ, ಪಿ. ಲಂಕೇಶ್, ಪೂರ್ಣಚಂದ್ರ ತೇಜಸ್ವಿ ಅವರಂತ, ಮಹಾನ್ ಸಾಹಿತಿಗಳು ಹುಟ್ಟಿದ ಜಿಲ್ಲೆ ಎಂಬ ಹೆಮ್ಮೆ ನಮ್ಮದು.
ಸ್ವಾತಂತ್ರ್ಯ ಸಂಗ್ರಾಮದಲ್ಲಿ, ಶಿವಮೊಗ್ಗ ಜಿಲ್ಲೆಯ ಪಾತ್ರ ಗಣನೀಯ. ಶಿಕಾರಿಪುರ ತಾಲೂಕು ಈಸೂರು ದೇಶದ ಪ್ರಥಮ ಸ್ವಾತಂತ್ರ್ಯ್ರ ಗ್ರಾಮ ಎಂಬ ಹೆಗ್ಗಳಿಕೆ ನಮ್ಮದು. ಈಸೂರಿನಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ 5 ಮಂದಿ ಹೋರಾಟಗಾರರು ದೇಶಕ್ಕಾಗಿ ತಮ್ಮ ಜೀವವನ್ನೇ ಅರ್ಪಿಸಿದ್ದಾರೆ.

ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳೆಯರು, ತಾಯಂದಿರ ಪಾತ್ರವೂ ಮುಖ್ಯವಾಗಿತ್ತು. ದೇಶಕ್ಕಾಗಿ ತ್ಯಾಗ ಮಾಡಿದ ಎಲ್ಲ ಮಹನೀಯರಿಗೆ, ಹೋರಾಟಗಾರರಿಗೆ ನನ್ನ ಸಹಸ್ರ ಸಹಸ್ರ ನಮನಗಳು.

ಇಂದು ನಮ್ಮ ದೇಶ ಕೃಷಿ, ವಿಜ್ಞಾನ ತಂತ್ರಜ್ಞಾನ, ಮೂಲಸೌಕರ್ಯ ಅಭಿವೃದ್ಧಿ ಕ್ಷೇತ್ರಗಳಲ್ಲಿ ನಾವು ಅಸಾಧಾರಣ ಪ್ರಗತಿ ಸಾಧಿಸಿದ್ದೇವೆ. ಭಾರತೀಯ ಭೂಸೇನೆ, ವಾಯುಸೇನೆ, ನೌಕಾಸೇನೆ ಪ್ರಬಲ ಶಕ್ತಿಯಾಗಿ ಬೆಳೆದಿವೆ. ವಿಶ್ವಮಟ್ಟದಲ್ಲಿ ನಾವು ಪ್ರಮುಖ ಶಕ್ತಿಯಾಗಿ ಬೆಳೆದಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮದೇ ಆದ ಹೆಸರು ಗಳಿಸಿದ್ದೇವೆ.

ಆಹಾರ ಉತ್ಪಾದನೆಯಲ್ಲಿ ಭಾರತ ಸ್ವಾವಲಂಬನೆಯನ್ನು ಸಾಧಿಸಿದೆ. ಬಹುಮುಖ್ಯವಾಗಿ ದೇಶದ ರಕ್ಷಣಾ ವ್ಯವಸ್ಥೆಯನ್ನು ಇನ್ನಷ್ಟು ಬಲಗೊಳಿಸಿ, ಸೈನಿಕರಲ್ಲಿ ಭರವಸೆ ಮೂಡಿಸುವ, ಅವರಲ್ಲಿ ವಿಶ್ವಾಸ ತುಂಬುವ ಕಾರ್ಯ ಮಾಡಲಾಗುತ್ತಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರು, ಮೀನುಗಾರರು, ನೇಕಾರರು ಸೇರಿದಂತೆ ಶೋಷಿತರ, ದುರ್ಬಲ ವರ್ಗದವರ ಏಳಿಗೆಗಾಗಿ ಕಾರ್ಯಕ್ರಮಗಳನ್ನು ರೂಪಿಸಿ ಅವರ ಬದುಕಿನಲ್ಲಿ ಹೊಸ ಭರವಸೆಯನ್ನು ಮೂಡಿಸಿವೆ.

ರೈತರಿಗೆ ಕೇಂದ್ರ ಸರ್ಕಾರ ಘೋಷಿಸಿರುವ ಕಿಸಾನ್ ಸನ್ಮಾನ್ ಯೋಜನೆಯಡಿ, ರಾಜ್ಯ ಸರ್ಕಾರ ಹೆಚ್ಚುವರಿಯಾಗಿ, ಪ್ರತಿ ರೈತರ ಖಾತೆಗಳಿಗೆ, 4ಸಾವಿರ ರೂಪಾಯಿ, ಎರಡು ಕಂತಿನಲ್ಲಿ ಹಾಕುವ ಯೋಜನೆಗೆ ಚಾಲನೆ ನೀಡಿದೆ. ಮೀನುಗಾರರ ಹಾಗೂ ನೇಕಾರರ ಸಾಲಮನ್ನಾ ಘೋಷಣೆಯಿಂದ, ಸಾವಿರಾರು ಮಂದಿ ಪ್ರಯೋಜನ ಪಡೆಯಲಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ, ಹಲವು ಪ್ರಮುಖ ನೀರಾವರಿ ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ರೈತರ ಹೊಲಗಳಿಗೆ ನೀರು ಉಣಿಸುವ ಇನ್ನೂ ಹಲವು ಪ್ರಮುಖ ನೀರಾವರಿ ಯೋಜನೆಗಳನ್ನು ಜಾರಿಗೊಳಿಸುವ ಪ್ರಕ್ರಿಯೆ ಜಾರಿಯಲ್ಲಿದೆ.

ಈ ಬಾರಿ ಅನಿರೀಕ್ಷಿತವಾಗಿ ಸುರಿದ ಮಳೆಯಿಂದ ಸಾವಿರಾರು ಮಂದಿ ಆಶ್ರಯ ಕಳೆದುಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ, ನೂರಾರು ಕುಟುಂಬಗಳು, ಮನೆ ಕಳೆದುಕೊಂಡು ಸಂತ್ರಸ್ತರಾಗಿದ್ದಾರೆ. ಜಿಲ್ಲೆಯ ಇತಿಹಾಸದಲ್ಲಿ ಇದುವರೆಗೂ ಆಗದಷ್ಟು ನಾಶ, ನಷ್ಟ ಉಂಟಾಗಿದೆ. ಜನರ ಬದುಕು ಕೊಚ್ಚಿ ಹೋಗಿದೆ. ಕುಸಿದ ಮನೆಗಳು, ಜರಿದ ಗುಡ್ಡಗಳು, ಮುಳುಗಿದ ತೋಟಗಳು, ಎಲ್ಲೆಲ್ಲೂ ನೀರೋ ನೀರು. ನೂರಾರು ಮಂದಿ ನೆರೆ ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ.

ಇಂತಹ ಸಂಕಷ್ಟದ ಸಂದರ್ಭದಲ್ಲಿ ಜನ-ಜಾನುವಾರುಗಳನ್ನು ರಕ್ಷಿಸುವ ಕೆಲಸ ಜಿಲ್ಲಾಡಳಿತದ ವತಿಯಿಂದ, ತಮ್ಮೆಲ್ಲರ ಸಹಕಾರದಿಂದ ಮಾಡಲಾಗಿದೆ.

ಪ್ರವಾಹದಿಂದ ಸಂಕಷ್ಟ ಅನುಭವಿಸುತ್ತಿರುವವರ ನೆರವಿಗೆ, ರಾಜ್ಯ ಸರ್ಕಾರ ಹೆಗಲು ಕೊಟ್ಟು ನಿಂತಿದೆ. ಪರಿಹಾರ ಕಾರ್ಯ ಚುರುಕುಗೊಳಿಸಲಾಗಿದೆ. ನೆರೆಯಿಂದ ಮನೆ, ಜಾನುವಾರು, ಕೃಷಿ ಭೂಮಿ ಕಳೆದುಕೊಂಡವರ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ.

ಜನರ ಕಣ್ಣೀರನ್ನು ಒರೆಸಿ, ಅವರ ಬದುಕಿನಲ್ಲಿ ಭರವಸೆಯ ಆಶಾಕಿರಣ ಮೂಡಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಮಾನ್ಯ ಮುಖ್ಯಮಂತ್ರಿ ಅವರು ನೆರೆಪೀಡಿತ ಸ್ಥಳಗಳಿಗೆ ಭೇಟಿ ನೀಡಿ, ಸಂತ್ರಸ್ತರ ಕಣ್ಣೀರನ್ನು ಒರೆಸಿ, ಅವರ ಶಾಶ್ವತ ಪುನರ್ ವಸತಿಗೆ ಸೂಚನೆಗಳನ್ನು ನೀಡಿದ್ದಾರೆ.

ನಿರಾಶ್ರಿತರಿಗೆ ತಕ್ಷಣದ ಅಗತ್ಯಕ್ಕಾಗಿ, ಬಟ್ಟೆ, ಪಾತ್ರೆ ಹಾಗೂ ಆಹಾರ ಸಾಮಾಗ್ರಿ ಖರೀದಿಸಲು, ಪ್ರತಿ ಕುಟುಂಬಕ್ಕೆ 10 ಸಾವಿರ ರೂ. ತಕ್ಷಣದ ಆರ್ಥಿಕ ನೆರವು ನೀಡಲು ಆದೇಶಿಸಲಾಗಿದೆ. ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡವರಿಗೆ ನೀಡಲಾಗುವ ಪರಿಹಾರದ ಮೊತ್ತವನ್ನು ಹೆಚ್ಚಿಸುವ ಪ್ರಕ್ರಿಯೆ ಜಾರಿಯಲ್ಲಿದೆ.

ಅನಿರೀಕ್ಷಿತವಾಗಿ, ಮುರಿದು ಬಿದ್ದ, ಸಾವಿರಾರು ಮಂದಿಯ ಬದುಕನ್ನು ಕಟ್ಟಿಕೊಡಲು ಎಲ್ಲರ ನೆರವು ಅಗತ್ಯವಿದೆ. ಈ ಕಾರ್ಯದಲ್ಲಿ, ಶಿವಮೊಗ್ಗದ ಜನತೆ ಜಿಲ್ಲಾಡಳಿತದೊಂದಿಗೆ, ಕೈ ಜೋಡಿಸಲು ಈ ಸಂದರ್ಭದಲ್ಲಿ ಮನವಿ ಮಾಡುತ್ತೇನೆ.

ಪರಿಹಾರ ಹಾಗೂ ಪುನರ್ವಸತಿ ಕಾರ್ಯದಲ್ಲಿ ನೂರಾರು ಮಂದಿ ತೊಡಗಿಸಿಕೊಂಡಿದ್ದಾರೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಸಹಾಯಹಸ್ತ ನೀಡಿ, ನೆರವಾಗುತ್ತಿರುವ ಎಲ್ಲರಿಗೂ ನಮನಗಳು.

ಹೋರಾಟದ ಫಲವಾಗಿ ದೊರೆತಿರುವ ಸ್ವಾತಂತ್ರ್ಯವನ್ನು, ಎಲ್ಲರೂ ಅರ್ಥಪೂರ್ಣವಾಗಿ ಬಳಸಬೇಕು.

ಸ್ವಾತಂತ್ರ್ಯ ಜನರ ನೆಮ್ಮದಿಯ ಬದುಕಿಗೆ ಪೂರಕವಾಗಬೇಕು. ಈ ನಿಟ್ಟಿನಲ್ಲಿ ದೇಶದ ಪ್ರತಿಯೊಬ್ಬರು ಕೆಲಸ ಮಾಡಬೇಕಿದೆ. ಇಂದಿನ ಈ ಶುಭ ಸಂದರ್ಭದಲ್ಲಿ, ಜಿಲ್ಲೆಯ ಎಲ್ಲಾ ಜನತೆಗೆ ಮತ್ತೊಮ್ಮೆ, ಸ್ವತಂತ್ರೋತ್ಸವದ ಶುಭಾಶಯಗಳನ್ನು ಹೇಳುತ್ತೇನೆ.

-ಶ್ರೀ ಕೆ.ಬಿ. ಶಿವಕುಮಾರ್
ಮಾನ್ಯ ಜಿಲ್ಲಾಧಿಕಾರಿಗಳು, ಶಿವಮೊಗ್ಗ

Tags: Independence DayK B Sivakumar IASKannada NewsMalnad NewsShivamoggaShivamogga DC Sivakumarಶಿವಮೊಗ್ಗಶಿವಮೊಗ್ಗ ಜಿಲ್ಲೆಸ್ವತಂತ್ರೋತ್ಸವ
Share196Tweet123Send
Previous Post

370 ರದ್ದು ಮಾಡುವ ಮೂಲಕ ಸರ್ದಾರ್ ಪಟೇಲ್ ಕನಸು ನನಸು: ಮೋದಿ

Next Post

ನೆರೆಯಿಂದ ಹಾನಿಗೊಳಗಾದ ಸರ್ಕಾರಿ ಶಾಲೆಗಳ ದುರಸ್ತಿಗೆ ಕ್ರಮ: ಮಹತ್ವದ ಸಭೆಯಲ್ಲಿ ಕೆ.ಇ. ಕಾಂತೇಶ್ ಘೋಷಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನೆರೆಯಿಂದ ಹಾನಿಗೊಳಗಾದ ಸರ್ಕಾರಿ ಶಾಲೆಗಳ ದುರಸ್ತಿಗೆ ಕ್ರಮ: ಮಹತ್ವದ ಸಭೆಯಲ್ಲಿ ಕೆ.ಇ. ಕಾಂತೇಶ್ ಘೋಷಣೆ

ನೆರೆಯಿಂದ ಹಾನಿಗೊಳಗಾದ ಸರ್ಕಾರಿ ಶಾಲೆಗಳ ದುರಸ್ತಿಗೆ ಕ್ರಮ: ಮಹತ್ವದ ಸಭೆಯಲ್ಲಿ ಕೆ.ಇ. ಕಾಂತೇಶ್ ಘೋಷಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಜೂ.12ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 11, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಮೈಸೂರು–ಮದಾರ್ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್‌ಗೆ ಎರಡು ಹೆಚ್ಚುವರಿ ಟ್ರಿಪ್‌ಗಳ ವಿಸ್ತರಣೆ

June 11, 2026
SWR to run special trains for Good Friday, Easter rush

ಬೆಂಗಳೂರು, ಹುಬ್ಬಳ್ಳಿ, ಚೆನ್ನೈ  ಸೇರಿದಂತೆ ಒಟ್ಟು 25 ರೈಲುಗಳ ಬಿಗ್ ಅಪ್ಡೇಟ್ ಇಲ್ಲಿದೆ

June 11, 2026
ಹೊಸನಗರದಲ್ಲಿ ಎರಡು ಕಳ್ಳತನ ಪ್ರಕರಣ: ಭದ್ರಾವತಿಯ ಯುವಕ ಬಂಧನ

ಹೊಸನಗರದಲ್ಲಿ ಎರಡು ಕಳ್ಳತನ ಪ್ರಕರಣ: ಭದ್ರಾವತಿಯ ಯುವಕ ಬಂಧನ

June 11, 2026
ಎಸ್‌ಎಸ್‌ಎಲ್‌ಸಿ ಉತ್ತರಪತ್ರಿಕೆ ಮೌಲ್ಯಮಾಪನ ಮರುಪರೀಶಿಲನಾ ಅರ್ಜಿ ವಜಾ

ಚೆಕ್ ಬೌನ್ಸ್ ಪ್ರಕರಣ: 2 ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆ ಸಾಧ್ಯವಿಲ್ಲ: ಹೈಕೋರ್ಟ್ ಸ್ಪಷ್ಟನೆ

June 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL