ನವದೆಹಲಿ: ಕೇಂದ್ರ ಮಾಜಿ ಹಣಕಾಸು ಸಚಿವ, ಬಿಜೆಪಿಯ ಹಿರಿಯ ನಾಯಕ ಅರುಣ್ ಜೇಟ್ಲಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಕೃತಕ ಉಸಿರಾಟದಲ್ಲಿದ್ದಾರೆ ಎಂದು ವರದಿಯಾಗಿದೆ.
ಜೇಟ್ಲಿ(66) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಅವರನ್ನು ಕಳೆದ ಕೆಲವು ದಿನಗಳ ಹಿಂದಿನಿಂದಲೇ ಏಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಮೂರು ದಿನಗಳ ಹಿಂದೆ ಕೊಂಚ ಉತ್ತಮಗೊಂಡಿದ್ದ ಅವರ ಆರೋಗ್ಯ ಇಂದು ಮುಂಜಾನೆಯಿಂದ ತೀವ್ರ ಹದಗೆಟ್ಟಿದೆ ಎಂದು ಹೇಳಲಾಗಿದೆ.
ಇನ್ನು, ಜೇಟ್ಲಿ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಆರೋಗ್ಯ ವಿಚಾರಿಸಿದ್ದಾರೆ.
ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಮತ್ತು ಆರೋಗ್ಯ ಇಲಾಖೆ ರಾಜ್ಯ ಸಚಿವೆ ಅಶ್ವಿನಿ ಚೌಬೆ ಅವರು ರಾಷ್ಟ್ರಪತಿಗಳೊಂದಿಗೆ ಭೇಟಿ ನೀಡಿದ್ದರು.
ಜೇಟ್ಲಿ ಅವರ ಆರೋಗ್ಯ ಗಂಭೀರವಾಗ ಹಿನ್ನೆಲೆಯಲ್ಲಿ ಆಗಸ್ಟ್ 9 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದಿನಿಂದಲೂ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಯಾವುದೇ ಬುಲೆಟಿನ್ ಬಿಗುಗಡೆ ಮಾಡಿಲ್ಲ.
Hero Motocorp Launches Glamour x With Integrated-ABS
Kalpa Media House | Bengaluru | Hero MotoCorp, the world's largest manufacturer of motorcycles and scooters, today announced the launch...
Read moreDetails






