ಬೆಂಗಳೂರು: ರಾಜ್ಯ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪಥನಗೊಂಡ ನಂತರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಿಜೆಪಿಯ ಬಿ.ಎಸ್. ಯಡಿಯೂರಪ್ಪ ಅವರ ಸಂಪುಟ ವಿಸ್ತರಣೆ ಬರೋಬ್ಬರಿ 26 ದಿನಗಳ ನಂತರ ನಡೆದಿದ್ದು, 17 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಇಂದು ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿಜೆಪಿಯ 17 ಶಾಸಕರು ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ವಿ.ಆರ್. ವಾಲಾ ಅವರು ಸಚಿವರಿಗೆ ಗೌಪ್ಯತಾವಿಧಿ ಬೋಧಿಸಿದರು.
ಕೆ.ಎಸ್. ಈಶ್ವರಪ್ಪ, ಎಸ್. ಸುರೇಶ್ ಕುಮಾರ್, ಗೋವಿಂದ ಕಾರಜೋಳ, ಡಾ.ಅಶ್ವತ್ಥ್ ನಾರಾಯಣ, ಲಕ್ಷ್ಮಣ ಸಂಗಪ್ಪ ಸವದಿ, ಆರ್. ಅಶೋಕ್, ಜಗದೀಶ್ ಶೆಟ್ಟರ್, ಬಿ. ಶ್ರೀರಾಮುಲು, ವಿ. ಸೋಮಣ್ಣ, ಸಿ.ಟಿ. ರವಿ, ಬಸವರಾಜ ಬೊಮ್ಮಾಯಿ, ಕೋಟ ಶ್ರೀನಿವಾಸ ಪೂಜಾರಿ, ಜೆ.ಸಿ. ಮಾಧುಸ್ವಾಮಿ, ಚಂದ್ರಕಾಂತ ಗೌಡ ಚನ್ನಪ್ಪಗೌಡ ಪಾಟೀಲ್, ಎಚ್. ನಾಗೇಶ್, ಪ್ರಭು ಚೌಹಾಣ್ ಮತ್ತು ಶಶಿಕಲಾ ಅಣ್ಣಾಸಾಹೇಬ್ ಜೊಳ್ಳೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
Discussion about this post