ಹೈದರಾಬಾದ್: ಭಾರೀ ನಿರೀಕ್ಷೆ ಹುಟ್ಟಿಸಿರುವ ಮೆಗಾಸ್ಟಾರ್ ಚಿರಂಜೀವಿ ಅಭಿನಯದ ‘ಸೈ ರಾ ನರಸಿಂಹ ರೆಡ್ಡಿ’ ಚಿತ್ರದ ಟೀಸರ್ ಇಂದು ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅಬ್ಬರಿಸುತ್ತಿದೆ.
ಭಾರತೀಯ ಚಿತ್ರರಂಗದ ದಿಗ್ಗಜರಾದ ಅಮಿತಾಬ್ ಬಚ್ಚನ್ ಹಾಗೂ ಮೆಗಾ ಸ್ಟಾರ್ ಚಿರಂಜೀವಿ ಅಭಿನಯಿಸಿರುವ ಈ ಚಿತ್ರ ಸ್ವಾತಂತ್ರ್ಯಪೂರ್ವದ ಹೋರಾಟದ ಕಥೆಯೊಂದು ತೆರೆಗೆ ಅಪ್ಪಳಿಸಲು ಸಿದ್ಧವಾಗಿದೆ.
ಚಿತ್ರದಲ್ಲಿ ಚಿರಂಜೀವಿ ನರಸಿಂಹ ರೆಡ್ಡಿ ಪಾತ್ರದಲ್ಲಿ ಕಾಣಿಸಿಕೊಂಡರೆ ಬಿಗ್ ಬಿ ಅವರು ರೆಡ್ಡಿಯ ಗುರು ಗೋಸಾಯಿ ವೆಂಕಣ್ಣನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಪ್ರಥಮ ಸ್ವಾತಂತ್ರ ಸಂಗ್ರಾಮಕ್ಕೂ 10 ವರ್ಷಗಳಿಗೂ ಮುನ್ನ 1847ರಲ್ಲೇ ಬ್ರಿಟೀಷರ ವಿರುದ್ಧ ರಣಕಹಳೆ ಊದಿ, ದೇಶದಲ್ಲಿ ಸ್ವಾತಂತ್ರದ ಮೊದಲ ಕ್ರಾಂತಿ ಹುಟ್ಟುಹಾಕಿದೆ ದೇಶಭಕ್ತನೊಬ್ಬರ ಕಥೆಯೇ ಈ ಚಿತ್ರ.
ಇಡಿಯ ದೇಶದಲ್ಲೇ ಭಾರೀ ನಿರೀಕ್ಷೆ ಹುಟ್ಟಿಸಿರುವ ಈ ‘ಸೈ ರಾ ನರಸಿಂಹ ರೆಡ್ಡಿ’ ಚಿತ್ರ ಅಕ್ಟೋಬರ್ 2ರಂದು ಪ್ರಪಂಚದಾದ್ಯಂತ ತೆರೆಕಾಣಲಿದೆ.

















