ಬೆಂಗಳೂರು: ಇಲ್ಲಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೊ ಆಸ್ಪತ್ರೆಗೆ ನಿನ್ನೆ ಸಂಜೆ ಸೂಪರ್ ಸ್ಟಾರ್ ರಜನಿಕಾಂತ್ ಭೇಟಿ ನೀಡಿದ್ದು, ತಮ್ಮ ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು.
ತಮ್ಮ ಆಪ್ತರೊಬ್ಬರು ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ವಿಚಾರಿಸಲು ರಜನಿ ಆಗಮಿಸಿದ್ದರು ಎಂದು ತಿಳಿದುಬಂದಿದೆ.
ನಿನ್ನೆ ಆಸ್ಪತ್ರೆಗೆ ರಜನಿಕಾಂತ್ ಆಗಮಿಸುತ್ತಾರೆ ಎಂಬ ಸುದ್ದಿ ಮಿಂಚಿನಂತೆ ಹರಡಿದ್ದು, ಈ ಹಿನ್ನೆಲೆಯಲ್ಲಿ ತಮ್ಮ ನೆಚ್ಚಿನ ನಟನನ್ನು ನೋಡಲು ಆಸ್ಪತ್ರೆಯ ಸುತ್ತಲೂ ಸಾವಿರಾರು ಅಭಿಮಾನಿಗಳು ನೆರೆದಿದ್ದರು. ಅಲ್ಲದೇ, ಆಸ್ಪತ್ರೆಯ ಒಳಗೂ ಸಹ ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಜನರು ಫೋಟೋ-ವೀಡಿಯೋ ತೆಗೆಯಲು ಹಾಗೂ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು.
Discussion about this post