ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈಗಾಗಲೇ ಇಡಿ ವಶದಲ್ಲಿರುವ ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ ಅವರ ಪುತ್ರಿಗೂ ಸಹ ಇದೇ ಅಕ್ರಮ ಆಸ್ತಿಯ ಉರುಳು ಸುತ್ತಿಕೊಂಡಿದೆ.
ಈ ಕುರಿತಂತೆ ವಿಚಾರಣೆಗೆ ಹಾಜರಾಗುವಂತೆ ಡಿಕೆಶಿ ಪುತ್ರಿ ಐಶ್ವರ್ಯಾಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದ್ದು, ಸೆ.12ರಂದು ಇಡಿ ಅಧಿಕಾರಿಗಳ ಮುಂದೆ ಹಾಜರಾಗಬೇಕಿದೆ.
ಇನ್ನು, ಸೆ.13ರಂದು ಡಿಕೆಶಿ ಅವರ ಇಡಿ ಕಸ್ಟಡಿ ಅಂತ್ಯವಾಗಲಿದ್ದು, ಇದರ ನಡುವೆಯೇ ಇವರ ಕುಟುಂಬಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಪ್ರತಿದಿನ ಕುಟುಂಬ ಸದಸ್ಯರು ಹಾಗೂ ವಕೀಲರು ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಲು ನ್ಯಾಯಾಲಯ ಅವಕಾಶ ಮಾಡಿಕೊಟ್ಟಿದ್ದು, ಮತ್ತೊಂದೆದೆ ಡಿಕೆ ಶಿವಕುಮಾರ್ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 13ಕ್ಕೆ ನ್ಯಾಯಾಲಯ ಮುಂದೂಡಿದೆ.















