ಹೈದರಾಬಾದ್: ಟಿಡಿಪಿ ಮುಖಂಡ, ಆಂಧ್ರಪ್ರದೇಶ ವಿಧಾನಸಭೆ ಮಾಜಿ ಸ್ಪೀಕರ್ ಕೋಡೆಲಾ ಶಿವಪ್ರಸಾದ್(72) ಇಂದು ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ.
ಇಂದು ಮುಂಜಾನೆ ಅವರು ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡಿದ್ದರು. ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಿದೇ ಅವರು ಮೃತಪಟ್ಟಿದ್ದಾರೆ.
ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್’ಆರ್’ಪಿ ಸರ್ಕಾರ ಆಂಧ್ರದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಶಿವಪ್ರಸಾದ್ ಪುತ್ರ ಮತ್ತು ಪುತ್ರಿಯ ಮೇಲೆ ಹಲವಾರು ಭ್ರಷ್ಟಾಚಾರ ಪ್ರಕರಣಗಳು ದಾಖಲಾಗಿವೆ. ಅಷ್ಟೇ ಅಲ್ಲ ಆಂಧ್ರ ವಿಧಾನಸಭೆಯ ಪೀಠೋಪಕರಣಗಳನ್ನು ತೆಗೆದುಕೊಂಡು ಹೋಗಿರುವ ಆರೋಪವೂ ಶಿವಪ್ರಸಾದ್ ಮೇಲಿದೆ.
ಶಿವಪ್ರಸಾದ್ ಅವರು ಆರು ಬಾರಿ ಶಾಸಕರಾಗಿ ಆಂಧ್ರಪ್ರದೇಶ ವಿಧಾನಸಭೆಗೆ ಆಯ್ಕೆಯಾಗಿದ್ದು, 2014ರಿಂದ 2019ರವರೆಗೆ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೇ. ಎನ್.ಟಿ. ರಾಮರಾವ್ ಮತ್ತು ಚಂದ್ರಬಾಬು ನಾಯ್ಡು ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
Discussion about this post