ನವದೆಹಲಿ: ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರನ್ನಾಗಿ ಏರ್ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತಂತೆ ಕೇಂದ್ರ ಸರ್ಕಾರ ಇಂದು ಆದೇಶ ಹೊರಡಿಸಿದ್ದು, ಪ್ರಸ್ತುತ ವಾಯು ಸೇನಾ ಸಿಬ್ಬಂದಿ ವಿಭಾಗದ ಉಪಾಧ್ಯಕ್ಷರಾಗಿರುವ ಭದೌರಿಯಾ ಅವರು, ಸೆಪ್ಟೆಂಬರ್ 30ರಂದು ನಿವೃತ್ತರಾಗಲಿರುವ ವಾಯುಪಡೆ ಮುಖ್ಯಸ್ಥ ಬಿ.ಎಸ್. ಧನೋವಾ ಅವರ ಸ್ಥಾನವನ್ನು ಅಲಂಕರಿಸಲಿದ್ದಾರೆ.
ಆಗ್ರಾ ಸಮೀಪದ ಭದೌರಿಯಾ ಎಂಬ ಹಳ್ಳಿಯಲ್ಲಿ ಜನಿಸಿದ ರಾಕೇಶ್ ಕುಮಾರ್ ಸಿಂಗ್ ಅವರು, ಆರ್ ಕೆ ಎಸ್ ಅವರು ಪರಮ್ ವಿಶಿಷ್ಟ ಸೇವಾ ಪದಕ, ಅತೀ ವಿಶಿಷ್ಟ ಸೇವಾ ಪದಕ, ವಾಯುಸೇನಾ ಪದಕ ಪಡೆದಿದ್ದಾರೆ. ಆರ್ ಕೆಎಸ್ ಅವರು ಪುಣೆಯಯಲ್ಲಿ ಮಾಸ್ಟರ್ ಇನ್ ಡಿಫೆನ್ಸ್ ಸ್ಟಡೀಸ್ ನಲ್ಲಿ ಪದವಿ ಪಡೆದಿದ್ದರು. ಬಾಂಗ್ಲಾದೇಶದ ಕಮಾಂಡ್ ಅಂಡ್ ಸ್ಟಾಪ್ ಕಾಲೇಜಿನಲ್ಲಿ ರಕ್ಷಣಾ ಕಲಿಕೆಯಲ್ಲಿ ಮಾಸ್ಟರ್ ಡಿಗ್ರಿ ಪಡೆದಿದ್ದರು. 1980ರಲ್ಲಿ ಭಾರತೀಯ ವಾಯುಪಡೆಯಲ್ಲಿ ಸೇವೆಗೆ ಸೇರ್ಪಡೆಗೊಂಡಿದ್ದರು. ಈವರೆಗೆ ವಿವಿಧ ಯುದ್ಧ ವಿಮಾನಗಳಲ್ಲಿ ಸುಮಾರು 4250 ಗಂಟೆಗಳ ಕಾಲ ಹಾರಾಟ ನಡೆಸಿದ ಅನುಭವ ಹೊಂದಿದ್ದಾರೆ. ಅಷ್ಟೇ ಅಲ್ಲ ಹಲವಾರು ಕಾರ್ಯಾಚರಣೆಯಲ್ಲಿಯೂ ಸಕ್ರಿಯವಾಗಿ ಪಾಲ್ಗೊಂಡಿದ್ದರು.
ಭದೌರಿಯಾ ಅವರು ಪುಣೆಯ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ ಹಳೆಯ ವಿದ್ಯಾರ್ಥಿಯಾಗಿದ್ದು, ಸುಮಾರು 4,000 ಗಂಟೆಗಳ ಕಾಲ ಹಾರಾಟ ನಡೆಸಿದ್ದಾರೆ.
Discussion about this post