80ರ ದಶಕದಲ್ಲಿ ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆ ನಿರ್ಮಿಸಿದ ಚಿತ್ರ ಅಂತ. 1981ರಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರಕ್ಕೆ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ಆಕ್ಷನ್ ಕಟ್ ಹೇಳಿದ್ದರು. ರೆಬೆಲ್‌ಸ್ಟಾರ್ ಅಂಬರೀಶ್ ನಾಯಕರಾಗಿ ನಟಿಸಿದ್ದ ಈ ಚಿತ್ರ ಕಲಾ ರಸಿಕರ ಮನಸೂರೆಗೊಂಡಿತ್ತು. ಈಗ ಈ ಚಿತ್ರಕ್ಕೆ ವಿಶೇಷ ತಂತ್ರಜ್ಞಾನಗಳನ್ನು ಅಳವಡಿಸಲಾಗಿದ್ದು, ಚಿತ್ರ ಸೆಪ್ಟೆಂಬರ್ 27ರಂದು ತೆರೆಗೆ ಬರಲಿದೆ.
ಸೆಪ್ಟೆಂಬರ್ 20ರಂದು ‘ಅಂತ‘ ಚಿತ್ರವನ್ನು ಮರು ಬಿಡುಗಡೆ ಮಾಡಬೇಕೆಂದುಕೊಂಡಿದ್ದ ನಿರ್ಮಾಪಕ ವೇಣುಗೋಪಾಲ್ ಅವರು ಡಾ.ವಿಷ್ಣವರ್ಧನ್ ಅವರ ಸ್ನೇಹ ಸಂಬಂಧಕ್ಕಾಗಿ ಒಂದು ವಾರ ತಡವಾಗಿ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.
ಪರಿಮಳ ಆರ್ಟ್ ಮೂಲಕ ಎಚ್.ಎನ್. ಮಾರುತಿ ಹಾಗೂ ವೇಣುಗೋಪಾಲ್ ಈ ಚಿತ್ರವನ್ನು ನಿರ್ಮಿಸಿದ್ದರು. ಎಸ್.ವಿ. ರಾಜೇಂದ್ರ ಸಿಂಗ್ ಬಾಬು ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದರು. ಜಿ.ಕೆ. ವೆಂಕಟೇಶ್ ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿದ್ದ ಅಂತ ಚಿತ್ರದ ಸುಮಧುರ ಗೀತೆಗಳು ಇಂದಿಗೂ ಜನಮಾನಸದಲ್ಲಿ ಅಚ್ಚಳಿಯದೇ ನಿಂತಿವೆ. ಈ ಚಿತ್ರವನ್ನು ಈಗ ಡಿಜಿಟಲ್ ಫಾರ್ಮಾಟ್‌ನಲ್ಲಿ ಬಿಡುಗಡೆ ಮಾಡಲು ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ.
ಹೊಸ ರೂಪದ ‘ಅಂತ‘ ಚಿತ್ರವನ್ನು ರಾಜ್ಯಾದ್ಯಂತ ಅತೀ ಹೆಚ್ಚು ಚಿತ್ರಮಂದಿರಗಳಲ್ಲಿ ಅದ್ದೂರಿಯಾಗಿ ಬಿಡುಗಡೆ ಮಾಡಲಾಗುತ್ತಿದೆ ಎಂದು ನಿರ್ಮಾಪಕ ವೇಣುಗೋಪಾಲ್ ತಿಳಿಸಿದ್ದಾರೆ. ಈ ಚಿತ್ರದ ಪ್ರಮುಖ ತಾರಾಗಣದಲ್ಲಿ ರೆಬೆಲ್‌ಸ್ಟಾರ್ ಅಂಬರೀಶ್(ದ್ವಿಪಾತ್ರ) ಲಕ್ಷ್ಮೀ, ಜಯಮಾಲಾ, ಲತಾ, ಪಂಡರೀಬಾಯಿ, ವಜ್ರಮುನಿ, ಪ್ರಭಾಕರ್, ಸುಂದರ ಕೃಷ್ಣ ಅರಸ್, ಶಕ್ತಿ ಪ್ರಸಾದ್, ಲಕ್ಷ್ಮಣ್, ಸಿ.ಸೀತಾರಾಮ್ ನಟಿಸಿದ್ದರು.
Discussion about this post