No Result
View All Result
Malnad is a Cultural ‘Gharana’ of Great Minds: Dr. Jayamala at Sahyadri Utsava
English Articles

Malnad is a Cultural ‘Gharana’ of Great Minds: Dr. Jayamala at Sahyadri Utsava

by ಕಲ್ಪ ನ್ಯೂಸ್
March 13, 2026
0

Kalpa Media House  |  Shimoga | Invoking the poetic essence of the Malnad landscape, veteran actor, former minister, and Chairperson...

Read moreDetails
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
  • Advertise With Us
  • Grievances
  • About Us
  • Contact Us
Saturday, March 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ: ನಾಡಹಬ್ಬ ದಸರಾ ಅದ್ದೂರಿ ಸಿದ್ದತೆ, ಇಲ್ಲಿದೆ ಕಾರ್ಯಕ್ರಮಗಳ ಸಂಪೂರ್ಣ ವಿವರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 25, 2019
in ಭದ್ರಾವತಿ
0
ಭದ್ರಾವತಿ: ನಾಡಹಬ್ಬ ದಸರಾ ಅದ್ದೂರಿ ಸಿದ್ದತೆ, ಇಲ್ಲಿದೆ ಕಾರ್ಯಕ್ರಮಗಳ ಸಂಪೂರ್ಣ ವಿವರ
Share on FacebookShare on TwitterShare on WhatsApp

ಭದ್ರಾವತಿ: ನಗರಸಭೆ ಆಡಳಿತವು ಪ್ರಸ್ತುತ ಸಾಲಿನ ನಾಡ ಹಬ್ಬ ದಸರಾ ಮಹೋತ್ಸವ-2019 ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ದತೆಯಲ್ಲಿ ತೊಡಗಿದೆ. ಉತ್ಸವಕ್ಕೆ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಡಾ.ಕೆ.ಎಸ್. ಕುಮಾರಸ್ವಾಮಿ ನಾಡದೇವತೆ ಶ್ರೀ ಚಾಮುಂಡಿ ದೇವಿಗೆ ಪೂಜೆ ಸಲ್ಲಿಸಿಸುವ ಮೂಲಕ ಚಾಲನೆ ನೀಡಲಿದ್ದಾರೆ ಎಂದು ಪೌರಾಯುಕ್ತ ಮನೋಹರ್ ಹೇಳಿದರು.

ಅವರು ಬುಧವಾರ ನಗರಸಭಾ ಕಛೇರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಈ ಹಿಂದೆ ನಗರಸಭೆ ಆಡಳಿತವು ನವರಾತ್ರಿಯ ಅಂತಿಮ ದಿನದಂದು ಅದ್ದೂರಿಯಾಗಿ ವೈಭವದ ಉತ್ಸವ ನೆರವೇರಿಸಿ ಬನ್ನಿ ಮುಡಿಯಲಾಗುತ್ತಿತ್ತು. ಆದರೆ ಪ್ರಸ್ತುತ ವರ್ಷದಲ್ಲಿ 9 ದಿನಗಳ ಕಾಲ ವಿವಿಧ ಬಗೆಯ ಕಾರ್ಯಕ್ರಮ ಮತ್ತು ಸಾಂಸ್ಕೃತಿಕ ಮೇಳಗಳನ್ನು ಹಮ್ಮಿಕೊಂಡಿರುವುದು ವಿಶೇಷವಾಗಿದೆ. ಕಳೆದ ವರ್ಷ 25 ಲಕ್ಷ ರೂ ವೆಚ್ಚ ಭರಿಸಲಾಗುತ್ತಿತ್ತು. ಈ ವರ್ಷ 21.5 ಲಕ್ಷ ರೂ ವೆಚ್ಚದಲ್ಲಿ 9 ದಿನಗಳ ಕಾಲ ಕಾರ್ಯಕ್ರಮ ಹಮ್ಮಿಕೊಂಡಿದೆ.

ಸೆ.29 ರ ಭಾನುವಾರ: ಬೆಳಿಗ್ಗೆ 10 ಗಂಟೆಗೆ ಗ್ರಾಮದೇವತೆ ಶ್ರೀ ಹಳದಮ್ಮ ದೇವಸ್ಥಾನದ ಪ್ರಾಂಗಣದಲ್ಲಿ ಶ್ರೀಚಾಮುಂಡೇಶ್ವರಿ ದೇವಿಗೆ ಪೂಜೆ ನೆರವೇರಿಸಿ ಅಲ್ಲಿಂದ ಹಳೇನಗರದ ಕನಕಮಂಟಪ ಮೈದಾನಕ್ಕೆ ಮೆರವಣಿಗೆ ಮೂಲಕ ತೆರಳಿ ನಾಡಹಬ್ಬಕ್ಕೆ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಡಾ.ಕೆ.ಎಸ್. ಕುಮಾರಸ್ವಾಮಿ ಚಾಲನೆ ನೀಡುವರು. ಸಂಜೆ ಶಾಸಕ ಬಿ.ಕೆ. ಸಂಗಮೇಶ್ವರ ನೇತೃತ್ವದಲ್ಲಿ ವೇದಿಕೆ ಕಾರ್ಯಕ್ರಮ ಹಾಗೂ ನೃತ್ಯ ರೂಪಕ ನಡೆಯಲಿದೆ.

ಸೆ.30 ರ ಸೋಮವಾರ: ಬೆಳಿಗ್ಗೆ ಯುವ ದಸರಾ ಮತ್ತು ಕ್ರೀಡಾ ಮತ್ತು ಭಾಷಣ ಸ್ಪರ್ಧೆಯು ಬಲಿಜ ಸಮುದಾಯ ಭವನದಲ್ಲಿ ನಡೆದರೆ, ಸಂಜೆ 6.30 ಕ್ಕೆ ಕನಕಮಂಟಪ ಮೈದಾನದಲ್ಲಿ ಸಂಗೀತ ಭಾವ ಸಂಗಮ ಹಾಗು ಹಾಸ್ಯ-ಲಾಸ್ಯ ಕಾರ್ಯಕ್ರಮ ನಡೆಯಲಿದೆ.

ಅ.1 ರ ಮಂಗಳವಾರ: ಕನಕಮಂಟಪ ಮೈದಾನದಲ್ಲಿ ಬೆಳಿಗ್ಗೆ ಕವಿಗೋಷ್ಟಿ, ಸಂಜೆ ಸುಗಮ ಸಂಗೀತ ಕಾರ್ಯಕ್ರಮ. ವೀರಭದ್ರೇಶ್ವರ ಚಿತ್ರಮಂದಿರದಲ್ಲಿ 2 ದಿನಗಳ ಕಾಲ ಉಚಿತ ಚಲನಚಿತ್ರ ಪ್ರದರ್ಶನ

ಅ.2 ರ ಬುಧವಾರ: ಗಾಂಧಿ ಜಯಂತಿ ಪ್ರಯುಕ್ತ ಮಾಧವಚಾರ್ ವೃತ್ತದ ಬಳಿ ಭದ್ರಾನದಿ ದಂಡೆಯಲ್ಲಿ ಸಾಮೂಹಿಕ ಸ್ವಚ್ಚತಾ ಕಾರ್ಯಕ್ರಮ ಮತ್ತು ಕನಕಮಂಟಪ ಮೈದಾನದಲ್ಲಿ ಪರಿಸರ ಜಾಗೃತಿ ಕುರಿತು ವಸ್ತುಪ್ರದರ್ಶನ, ಸಂಜೆ ನಗರಸಭೆ ಅಧಿಕಾರಿ ಹಾಗೂ ಸಿಬ್ಬಂದಿಯವರಿಂದ ನಾವು-ನೀವು ಮತ್ತು ಪರಿಸರ ಕಿರು ರೂಪಕ, ಪೌರ ಕಾರ್ಮಿಕರಿಂದ ಬದುಕು-ಬವಣೆ ಹಾಗು ಸ್ವಚ್ಚತೆ ರೂಪಕ ನಡೆಯಲಿದೆ.

ಅ.3 ರ ಗುರುವಾರ: ಬೆಳಿಗ್ಗೆ 6 ಗಂಟೆಗೆ ಯೋಗ ನಡಿಗೆ, 7 ಕ್ಕೆ ಸಾಮೂಹಿಕ ಯೋಗಾಸನ, ಸಂಜೆ ಭಾವಸಂಗಮ.

ಅ.4 ರ ಶುಕ್ರವಾರ: ಬೆಳಿಗ್ಗೆ 8.30 ಕ್ಕೆ ನ್ಯೂಟೌನ್ ಬಂಟರ ಭವನದಲ್ಲಿ ಮಹಿಳಾ ಸಂಘಗಳಿಂದ ಆಹಾರ ತಯಾರಿಕಾ ಸ್ಪರ್ಧೆ ಮತ್ತು ಕ್ರೀಡಾಕೂಟ, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ.

ಅ.5 ರ ಶನಿವಾರ: ಬೆಳಿಗ್ಗೆ 9.30 ಕ್ಕೆ ಇಡ್ಲಿ ತಿನ್ನುವ ಸ್ಪರ್ಧೆ. ಸಂಜೆ ಶಾಂತಲಾ ಕಲಾವೇದಿಕೆಯಿಂದ ಜಾನಪದ ಐತಿಹಾಸಿಕ ಈರ್ ಮಾಸ್ತೆವ್ವ ನಾಟಕ.

ಅ.6 ರ ಭಾನುವಾರ: ಬೆಳಿಗ್ಗೆ 10.30 ಕ್ಕೆ ನ್ಯೂಟೌನ್ ಗಾಂಧಿಪಾರ್ಕ್‌ನಲ್ಲಿ ನನ್ನ ಕನಸಿನ ಭದ್ರಾವತಿ ಶೀರ್ಷಿಕೆಯಡಿ ಚಿತ್ರಕಲಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಭಾಷಣ ಸ್ಪರ್ಧೆ, ಸಂಜೆ ಸಂಸ್ಕೃತಿ ವೈಭವ ಸಾಂಸ್ಕೃತಿಕ ಕಾರ್ಯಕ್ರಮ.

ಅ.7ರ ಸೋಮವಾರ: ಬೆಳಿಗ್ಗೆ 9 ಕ್ಕೆ ಕಛೇರಿಯ ವಿವಿಧ ನೀರು ಶುದ್ದೀಕರಣ ಕೇಂದ್ರಗಳಲ್ಲಿ ಆಯುಧಪೂಜೆ, ಸಂಜೆ ಭದ್ರಾವತಿ ಬ್ರದರ್ಸ್‌ ರವರಿಂದ ಸಂಗೀತ ರಸಸಂಜೆ.

ಅ.8ರ ಮಂಗಳವಾರ: ಮಧ್ಯಾಹ್ನ 2 ಕ್ಕೆ ಲೋಯರ್ ಹುತ್ತಾ ಬಳಿಯ ಶ್ರೀ ತಿರುಮಲ ವೆಂಕಟೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಅಲಂಕೃತಗೊಂಡ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿ ಮತ್ತು ನಗರದ ವಿವಿಧ ದೇವಾಲಯಗಳ ದೇವಾನುದೇವತೆಗಳ ಭವ್ಯ ಮೆರವಣಿಗೆಯು ಶಾಸಕ ಬಿ.ಕೆ. ಸಂಗಮೇಶ್ವರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮೆರವಣಿಗೆಯಲ್ಲಿ ಜಾನಪದ ಕಲಾ ಪ್ರಾಕಾರಗಳಾದ ವೀರಗಾಸೆ, ಕೀಲುಕುದುರೆ, ಡೊಳ್ಳುಕುಣಿತ, ಮಂಗಳವಾದ್ಯ, ವಿವಿಧ ವಾದ್ಯಗೋಷ್ಟಿಯ ತಂಡಗಳು ಹಾಗು ಶಾಲಾ ಮಕ್ಕಳ ವಿಶೇಷ ವೇಷಭೂಷಣಗಳು ಇರುತ್ತದೆ. ಸಂಜೆ 7 ಕ್ಕೆ ಕನಕ ಮಂಟಪ ಮೈದಾನದಲ್ಲಿ ತಾಲೂಕು ದಂಡಾಧಿಕಾರಿಗಳಿಂದ ಬನ್ನಿ ಮುಡಿಯವ ಶಮಿ ಪೂಜೆ ನೆರವೇರುವುದು.

ಈ ಸಂದರ್ಭದಲ್ಲಿ ರಾವಣ ಸಂಹಾರದ ವಿಶೇಷ ಆಕರ್ಶನೆಯ ಪಟಾಕಿ ಸಿಡಿಸುವ ಕಾರ್ಯಕ್ರಮ ನಡೆಯಲಿದೆ ಎಂದು ಪೌರಾಯುಕ್ತ ಮನೋಹರ್ ತಿಳಿಸಿದರು. ಅಲ್ಲದೆ ಈ ಉತ್ಸವ ಆಚರಣೆಗೆ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ವಿವಿಧ ಉಸ್ತುವಾರಿ ಸಮಿತಿಗಳನ್ನು ರಚಿಸಲಾಗಿದೆ ಎಂದರು.

ಗೋಷ್ಠಿಯಲ್ಲಿ ಕಂದಾಯಾಧಿಕಾರಿ ರಾಜಕುಮಾರ್, ಪರಿಸರ ಇಂಜಿನಿಯರ್ ರುದ್ರೇಗೌಡ, ಹಿರಿಯ ಲೆಕ್ಕಾಧಿಕಾರಿ ಮಹಮದ್ ಅಲಿ, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಶ್ರೀರಂಗ, ವ್ಯವಸ್ಥಾಪಕಿ ಸುನಿತಾ ಕುಮಾರಿ, ಸಂಯೋಜನಾಧಿಕಾರಿ ಸುಹಾಸಿನಿ ಮುಂತಾದವರಿದ್ದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiDasara FestivalMalnad NewsNada Bagga DasaraSri Chamundeshwari DeviVijayadashamiಆಯುಧಪೂಜೆನಾಡ ಹಬ್ಬ ದಸರಾಭದ್ರಾವತಿವಿಜಯದಶಮಿಶ್ರೀಚಾಮುಂಡೇಶ್ವರಿ ದೇವಿ
Share232Tweet123Send
Previous Post

Crime News: ಹೊಸನಗರ-ಕಾಣೆಯಾಗಿದ್ದ ಯುವತಿ ಶವವಾಗಿ ಬಾವಿಯಲ್ಲಿ ಪತ್ತೆ

Next Post

ಧ್ರುವಾ ಸರ್ಜಾ ವಿವಾಹಕ್ಕೆ ಸ್ಯಾಂಡಲ್’ವುಡ್ ಸಜ್ಜು, ಅದು 14 ವರ್ಷಗಳ ‘ಅದ್ದೂರಿ’ ಪ್ರೀತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಧ್ರುವಾ ಸರ್ಜಾ ವಿವಾಹಕ್ಕೆ ಸ್ಯಾಂಡಲ್’ವುಡ್ ಸಜ್ಜು, ಅದು 14 ವರ್ಷಗಳ ‘ಅದ್ದೂರಿ’ ಪ್ರೀತಿ

ಧ್ರುವಾ ಸರ್ಜಾ ವಿವಾಹಕ್ಕೆ ಸ್ಯಾಂಡಲ್’ವುಡ್ ಸಜ್ಜು, ಅದು 14 ವರ್ಷಗಳ ‘ಅದ್ದೂರಿ’ ಪ್ರೀತಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಆಸ್ಪತ್ರೆ – ವಿದ್ಯಾರ್ಥಿನಿಲಯಗಳಿಗೆ ಸಮರ್ಪಕ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

ಆಸ್ಪತ್ರೆ – ವಿದ್ಯಾರ್ಥಿನಿಲಯಗಳಿಗೆ ಸಮರ್ಪಕ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

March 13, 2026
ಮಾ.24, 25 ಶರಣ ಸಾಹಿತ್ಯ ಸಮ್ಮೇಳನ | ಸಮ್ಮೇಳನಾಧ್ಯಕ್ಷರಾಗಿ ಬೆಕ್ಕಿನ ಕಲ್ಮಠ ಶ್ರೀಗಳಿಗೆ ಆಹ್ವಾನ

ಮಾ.24, 25 ಶರಣ ಸಾಹಿತ್ಯ ಸಮ್ಮೇಳನ | ಸಮ್ಮೇಳನಾಧ್ಯಕ್ಷರಾಗಿ ಬೆಕ್ಕಿನ ಕಲ್ಮಠ ಶ್ರೀಗಳಿಗೆ ಆಹ್ವಾನ

March 13, 2026
ಜ.17ರಂದು ಭದ್ರಾವತಿಯ ಬಹುತೇಕ ಕಡೆ, ಮಾಚೇನಹಳ್ಳಿ ಪ್ರದೇಶದಲ್ಲಿ ಕರೆಂಟ್ ಇರಲ್ಲ | ಇಲ್ಲಿದೆ ಪಟ್ಟಿ

ಗಮನಿಸಿ! ಮಾರ್ಚ್ 14-15ರಂದು ಶಿವಮೊಗ್ಗದ ಈ ಎಲ್ಲ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

March 13, 2026
ಮಾನವೀಯತೆ ಜಾಗೃತಗೊಳಿಸಲು ಸಾಹಿತ್ಯ ಮದ್ದಾಗಲಿದೆ: ವಿಮರ್ಶಕಿ ಆಶಾದೇವಿ

ಮಾನವೀಯತೆ ಜಾಗೃತಗೊಳಿಸಲು ಸಾಹಿತ್ಯ ಮದ್ದಾಗಲಿದೆ: ವಿಮರ್ಶಕಿ ಆಶಾದೇವಿ

March 13, 2026
ಎಪ್ರಿಲ್ 10ರಿಂದ 20 | ಪುತ್ತೂರು ಮಹಾಲಿಂಗೇಶ್ವರ ಜಾತ್ರೆ | ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

ಎಪ್ರಿಲ್ 10ರಿಂದ 20 | ಪುತ್ತೂರು ಮಹಾಲಿಂಗೇಶ್ವರ ಜಾತ್ರೆ | ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

March 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL