ಶಿವಮೊಗ್ಗ: ರಾಜ್ಯ ಆಡಳಿತಾರೂಢ ಭಾರತೀಯ ಜನತಾ ಪಕ್ಷದ ರಾಜ್ಯ ಉಪಾಧ್ಯಕ್ಷರನ್ನಾಗಿ ಹಿರಿಯ ಮುಖಂಡ, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ. ಭಾನುಪ್ರಕಾಶ್ ಅವರನ್ನು ನಿಯೋಜನೆ ಮಾಡಲಾಗಿದೆ.
ಈ ಕುರಿತಂತೆ ಆದೇಶ ಹೊರಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಪಕ್ಷದ ಹಿರಿಯ ಮುಖಂಡರಾಗಿ ಹಾಗೂ ವಿಧಾನಪರಿಷತ್ ಸದಸ್ಯರಾಗಿ ಅನುಭವ ಹೊಂದಿರುವ ಭಾನುಪ್ರಕಾಶ್ ಅವರನ್ನು ನೇಮಕ ಮಾಡಿದ್ದಾರೆ.
ಇವರ ನೇಮಕಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಸಚಿವ ಕೆ.ಎಸ್. ಈಶ್ವರಪ್ಪ ಸೇರಿದಂತೆ ಜಿಲ್ಲಾ ಹಾಗೂ ರಾಜ್ಯ ಮುಖಂಡರು ಅಭಿನಂದಿಸಿದ್ದಾರೆ.
















