ಮುಂಬೈ: ಎರಡು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಿದ್ದು, ಮಹಾರಾಷ್ಟ್ರದಲ್ಲಿ ಮತ್ತೆ ಬಿಜೆಪಿ-ಶಿವಸೇನೆ ಮೈತ್ರಿಕೂಟ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯಲ್ಲಿ ಸಂಭ್ರಮ ಮನೆ ಮಾಡಿದೆ.
ಒಟ್ಟು 288 ಸ್ಥಾನಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ ಬಹುಮತಕ್ಕೆ 145 ಸ್ಥಾನಗಳ ಅಗತ್ಯವಿದ್ದು, ಬಿಜೆಪಿ 102, ಶಿವಸೇನೆ 60, ಕಾಂಗ್ರೆಸ್ 44, ಎನ್’ಸಿಪಿ 55 ಹಾಗೂ ಇತರರು, 27 ಸ್ಥಾನಗಳನ್ನು ಪಡೆದಿದ್ದಾರೆ.
ಇನ್ನು, ಈ ಕುರಿತಂತೆ ಮಾತನಾಡಿರುವ ಶಿವಸೇನೆ ನಾಯಕ ಸಂಜಯ್ ರಾವತ್, ಬಿಜೆಪಿ ಮತ್ತು ಶಿವಸೇನೆ ಒಟ್ಟಾಗಿ ಸರ್ಕಾರ ರಚನೆ ಮಾಡಲಿದ್ದು ಎರಡೂ ಪಕ್ಷಗಳ ನಡುವೆ 50:50 ಸೂತ್ರವನ್ನು ಅಳವಡಿಸಿಕೊಳ್ಳಲಾಗುವುದು ಎಂದಿದ್ದಾರೆ.
ಇಂದು ಉದ್ದವ್ ಠಾಕ್ರೆಯವರನ್ನು ಇಂದು ಭೇಟಿ ಮಾಡಲಿದ್ದು, ನಾವು ಖಂಡಿತವಾಗಿಯೂ ಮೈತ್ರಿ ಮುಂದುವರೆಸಿ ಸರ್ಕಾರ ರಚಿಸುತ್ತೇವೆ ಎಂದರು.
Discussion about this post