ಮುಂಬೈ: ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಎರಡನೆಯ ಬಾರಿ ಆಯ್ಕೆ ಮಾಡಲಾಗಿದೆ.
ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆಯಾದ ಎಲ್ಲ ಶಾಸಕರು ಹಾಜರಿದ್ದು, ದೇವೇಂದ್ರ ಫಡ್ನವಿಸ್ ಅವರನ್ನು ಆಯ್ಕೆ ಮಾಡುವಲ್ಲಿ ಸಮ್ಮತಿ ಸೂಚಿಸಿದರು.
ಈ ಕುರಿತಂತೆ ಮಾತನಾಡಿರುವ ದೇವೇಂದ್ರ ಫಡ್ನವಿಸ್, ನನ್ನ ಮೇಲೆ ವಿಶ್ವಾಸವಿಟ್ಟು ಮತ್ತೆ ಆಯ್ಕೆ ಮಾಡಿರುವುದಕ್ಕೆ ನಾನು ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ. ಈ ವಿಚಾರದಲ್ಲಿ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಸಹಕಾರವೂ ಸಹ ದೊಡ್ಡದು ಎಂದರು.
Discussion about this post