ಬೆಂಗಳೂರು: ಮತಾಂಧ ಟಿಪ್ಪು ಸುಲ್ತಾನ್ ಕುರಿತಾಗಿ ವಿಚಾರವನ್ನು ಶಾಲಾ ಪಠ್ಯಪುಸ್ತಕದಿಂದ ತೆಗೆದುಹಾಕುವ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ನಿರ್ಣಯ ಕೈಗೊಳ್ಳಲು ಮುಂದಾಗಿರುವುದು ಸ್ವಾಗತಾರ್ಹ ಎಂದು ಹಿಂದೂ ಜನಜಾಗೃತಿ ಸಮಿತಿ ಹೇಳಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಮಿತಿ, ಕಾಂಗ್ರೆಸ್ ಕಾಲಾವಧಿಯಲ್ಲಿ ಮುಸಲ್ಮಾನರ ಮತಕ್ಕಾಗಿ ಇತಿಹಾಸದಲ್ಲಿ ಅತ್ಯಂತ ಕ್ರೂರಿ, ಮತಾಂಧ, ಅಸಹಿಷ್ಣು, ಕನ್ನಡ ವಿರೋಧಿ ಟಿಪ್ಪು ಸುಲ್ತಾನನನ್ನು ಅನಗತ್ಯವಾಗಿ ವೈಭವೀಕರಿಸಿ ಅವನನ್ನು ಮೈಸೂರು ಹುಲಿ, ಸ್ವಾತಂತ್ರ್ಯ ಹೋರಾಟಗಾರ, ಉತ್ತಮ ಆಡಳಿತಗಾರ ಹೀಗೆ ಸತ್ಯ ಇತಿಹಾಸವನ್ನು ತಿರುಚಿ ಜನರಿಗೆ ಸುಳ್ಳು ಇತಿಹಾಸವನ್ನು ತಿಳಿಸುವ ಮತ್ತು ಈ ಮೂಲಕ ಮಕ್ಕಳಿಗೆ ನಕಲಿ ಇತಿಹಾಸವನ್ನು ಕಲಿಸುವ ಪ್ರಯತ್ನ ನಡೆದಿತ್ತು ಎಂದು ಆರೋಪಿಸಿದೆ.
ಇಂತಹ ಸುಳ್ಳು ಮತ್ತು ತಿರುಚಿದ ಟಿಪ್ಪುವಿನ ಇತಿಹಾಸವನ್ನು ಶಾಲಾ ಪಠ್ಯಕ್ರಮದಿಂದ ತೆಗೆದು ಹಾಕುವ ನಿರ್ಣಯ ತೆಗೆದುಕೊಳ್ಳಲು ಬಿ.ಎಸ್. ಯಡಿಯೂರಪ್ಪನವರ ಸರ್ಕಾರ ಮುಂದಾಗಿರುವುದು ಅತ್ಯಂತ ಸ್ವಾಗತಾರ್ಹ ನಿರ್ಣಯವಾಗಿದೆ. ಇದನ್ನು ಹಿಂದೂ ಜನಜಾಗೃತಿ ಸಮಿತಿಯು ಬೆಂಬಲಿಸುತ್ತದೆ ಎಂದಿದೆ.
ಟಿಪ್ಪು ಎಕ್ಸ್’ಪ್ರೆಸ್ ರೈಲಿನ ಹೆಸರು ಬದಲಾಯಿಸಿ
ಇನ್ನು, ಇದರ ಜೊತೆಗೆ ಮೈಸೂರು ಬೆಂಗಳೂರು ನಡುವೆ ಸಂಚರಿಸುವ ಟಿಪ್ಪು ಎಕ್ಸ್’ಪ್ರೆಸ್ ರೈಲಿನ ಹೆಸರನ್ನು ಬದಲಾಯಿಸಿ, ಕೃಷ್ಣರಾಜ ಒಡೆಯರ್ ಹೆಸರನ್ನು ಇಡಬೇಕು ಎಂದು ಸಮಿತಿ ಆಗ್ರಹಿಸಿದೆ.
Get In Touch With Us info@kalpa.news Whatsapp: 9481252093, 94487 22200
Discussion about this post