ಸುದ್ಧಿ: ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ ಭರವಸೆ ನೀಡಿದ್ದಾರೆ.
ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಂತೆ ಒತ್ತಾಯಿಸಿ ಸುವರ್ಣ ಕರ್ನಾಟಕ ರಕ್ಷಣಾ ಸೇನೆ ಸೇರಿದಂತೆ ಕರ್ನಾಟಕ ಸಂಘಟನೆಗಳ ಒಕ್ಕೂಟ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.
ಕರ್ನಾಟಕದಲ್ಲಿ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡಬೇಕು ಎನ್ನುವುದು ನಮ್ಮ ಸರ್ಕಾರದ ಆಶಯವೂ ಸಹ ಆಗಿದ್ದು, ಇದಕ್ಕೆ ಅವಕಾಶ ಕಲ್ಪಿಸುವ ಸರೋಜಿನಿ ಮಹಿಷಿ ವರದಿ ಜಾರಿಗೆ ನಾವು ಬದ್ಧರಾಗಿದ್ದೇವೆ ಎಂದು ಭರವಸೆ ನೀಡಿದರು.
ಸಚಿವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಕಳೆದ 10 ದಿನಗಳಿಂದ ನಡೆಸುತ್ತಿದ್ದ ಪ್ರತಿಭಟನೆಯನ್ನು ಒಕ್ಕೂಟ ಹಿಂಪಡೆದಿದೆ.
Get In Touch With Us info@kalpa.news Whatsapp: 9481252093
Discussion about this post