ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ನೀಡಿರುವ ಸುಪ್ರೀಂ ಕೋರ್ಟ್, ಜಾಮೀನು ವಿರುದ್ಧ ಇಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ.
ದೆಹಲಿ ಹೈಕೋರ್ಟ್ ಶಿವಕುಮಾರ್ ಅವರಿಗೆ ನೀಡಿದ್ದ ಜಾಮೀನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸುಪ್ರೀಂನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಆದರೆ, ಇದನ್ನು ವಜಾಗೊಳಿಸಿರುವ ನ್ಯಾಯಪೀಠ, ಡಿಕೆಶಿ ವಿರುದ್ಧ ಬಲವಂತದ ಕ್ರಮ ಜರುಗಿಸಬಾರದು ಎಂದು ಹೇಳಿದೆ.
ಅಕ್ರಮ ಹಣ ವರ್ಗಾವಣೆಗೆ ಸಂಬಂಧಪಟ್ಟಂತೆ ಶಿವಕುಮಾರ್ ಅವರನ್ನು ಸೆ.3 ರಂದು ಇಡಿ ಬಂಧಿಸಿತ್ತು. ಇದರ ನಂತರ ಡಿಕೆಶಿ 48 ದಿನಗಳ ಕಾಲ ದೆಹಲಿಯ ತಿಹಾರ್ ಜೈಲಿನಲ್ಲಿ ಸೆರೆವಾಸ ಅನುಭವಿಸಿದ್ದರು. ಕಳೆದ ತಿಂಗಳು ಅಂತ್ಯದಲ್ಲಿ ದೆಹಲಿ ಹೈಕೋರ್ಟ್ ಡಿಕೆಶಿಗೆ ಜಾಮೀನು ಮಂಜೂರು ಮಾಡಿತ್ತು.
Get In Touch With Us info@kalpa.news Whatsapp: 9481252093

















