ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ಮಲೆಗಾಂವ್ ಸ್ಪೋಟದ ಆರೋಪಿ, ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರಿಗೆ ಕೇಂದ್ರ ಸರ್ಕಾರದಲ್ಲೊಂದು ಮಹತ್ವದ ಸ್ಥಾನ ನೀಡಿದ್ದು, ರಕ್ಷಣಾ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಗೆ ನೇಮಕ ಮಾಡಲಾಗಿದೆ.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದ 21 ಸದಸ್ಯರ ಈ ಸಮಿತಿಗೆ ಠಾಕೂರ್ ಅವರನ್ನು ನೇಮಿಸಿರುವ ಕೇಂದ್ರ ಸರ್ಕಾರದ ಈ ನಡೆ ಯಾವ ರೀತಿಯ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.
2019ರ ಸಂಸತ್ ಚುನಾವಣೆಯಲ್ಲಿ ಭೋಪಾಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪ್ರಜ್ಞಾ ಠಾಕೂರ್ ಅವರು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರನ್ನು ಸೋಲಿಸಿದ್ದರು. ಮಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆರೋಪಿಯಾಗಿದ್ದ ಪ್ರಜ್ಞಾ ಅವರು 2017ರ ಏಪ್ರಿಲ್ ತಿಂಗಳಿನಲ್ಲಿ ಮುಂಬೈ ಹೈಕೋರ್ಟ್‌ನಿಂದ ಜಾಮೀನು ಪಡೆದುಕೊಂಡಿದ್ದರು.
Get in Touch With Us info@kalpa.news Whatsapp: 9481252093

















