ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಪೌರತ್ವ ತಿದ್ದುಪಡಿ ಮಸೂದೆ ನಮ್ಮಲ್ಲಿ ಜಾರಿಯಾದರೆ ರಾಜ್ಯ ಹೊತ್ತಿ ಉರಿಯಲಿದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿರುವ ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಹೇಳಿಕೆಗೆ ತಿರುಗೇಟು ಮಾಡಿರುವ ಸಚಿವ ಸಿ.ಟಿ. ರವಿ, ನಾವು ನಿಮ್ಮ ವಿರುದ್ಧ ಬೀದಿಗಿಳಿದರೆ ನಿಮ್ಮ ಗತಿಯೇನಾಗುತ್ತದೆ ಎಂಬುದನ್ನು ಒಮ್ಮೆ ಚಿಂತಿಸಿ ಎಂದಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ವಿಚಾರದಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ನಾವು ಸೂಕ್ಷ್ಮ ಹಾಗೂ ಮೌನವಾಗಿ ಗಮನಿಸುತ್ತಿದ್ದೇವೆ. ನಾವು ತಾಳ್ಮೆಯಿಂದ ಇದ್ದೇವೆ ಎಂದರೆ ಅದು ನಮ್ಮ ದೌರ್ಬಲ್ಯವಲ್ಲ. ಗೋದ್ರಾದಲ್ಲಿ ರೈಲಿಗೆ ಬೆಂಕಿ ಹಾಕಿದ ಪ್ರಕರಣದ ನಂತರದ ಘಟನೆಗಳನ್ನು ಅವರು ಒಮ್ಮೆ ನೆನಪಿಸಿಕೊಳ್ಳಿ. ಒಂದು ವೇಳೆ ನಾವು ನಿಮ್ಮ ವಿರುದ್ಧ ಬೀದಿಗಿಳಿದರೆ ಏನಾಗುತ್ತದೆ ಎಂಬುದನ್ನು ಚಿಂತಿಸಿ ಎಂದು ಎಚ್ಚರಿಕೆ ನೀಡಿದ್ದಾರೆ.
ಇನ್ನು, ನೂರಾರು ಕೋಟಿ ರೂ.ಗಳ ಅವ್ಯವಹಾರಕ್ಕೆ ಕಾರಣವಾಗಿರುವ ಇಂದಿರಾ ಕ್ಯಾಂಟೀನ್ ನನ್ನು ಮುಚ್ಚುವುದೇ ಲೇಸು. ಒಂದು ವೇಳೆ ಅದನ್ನು ಸರ್ಕಾರದಿಂದ ನಡೆಸುವುದಾದರೆ ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಹೆಸರಿಡಬೇಕು, ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷ ಲೂಟಿ ಮಾಡಿದ ಹಣದಿಂದ ಅದನ್ನು ನಡೆಸಲಿ ಎಂದಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post