ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಬಿಎಂಟಿಸಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಕಂಡಕ್ಟರ್ ಮೇಲೆ ಆಸಿಡ್ ದಾಳಿ ನಡೆಸಿದ ಪ್ರಕರಣ ನಡೆದಿದೆ.
ಬಾಗಲಕುಂಟೆಯಲ್ಲಿ ಈ ಘಟನೆ ನಡೆದಿದ್ದು, ಸ್ಕೂಟರ್’ನಲ್ಲಿ ಆಗಮಿಸಿದ ಇಬ್ಬರು ದುಷ್ಕರ್ಮಿಗಳು ಆಕೆಯ ಮೇಲೆ ಆಸಿಡ್ ದಾಳಿ ನಡೆಸಿದ್ದಾರೆ.
ಶಿರಾ ಮೂಲದ ಇಂದಿರಾ ಬಾಯಿ ಬಿಎಂಟಿಸಿಯ ಪೀಣ್ಯ ಡಿಪೋದಲ್ಲಿ ಕಂಡಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಇಂದು ಮುಂಜಾನೆ ಡಿಪೋಗೆ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಆಕೆಯ ಮುಖದ ಮೇಲೆ ಆಸಿಡ್ ದಾಳಿ ನಡೆಸಿದ್ದು, ಅವರ ಮುಖ ಹಾಗೂ ಕೈ ಸೇರಿದಂತೆ ಹಲವು ಭಾಗಗಳು ಸುಟ್ಟು ಹೋಗಿದೆ.
ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Get in Touch With Us info@kalpa.news Whatsapp: 9481252093

















