ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ರಾಜ್ಯದಲ್ಲಿ ಜಾರಿಯಾದರೆ ಕರ್ನಾಟಕ ಹೊತ್ತಿ ಉರಿಯುತ್ತದೆ ಎಂದು ಬಹಿರಂಗ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ಯು.ಟಿ. ಖಾದರ್ ವಿರುದ್ಧ ದೂರು ದಾಖಲಿಸಲಾಗಿದೆ.
ಈ ಕುರಿತಂತೆ ದಕ್ಷಿಣ ಕನ್ನಡ ಯುವ ಮೋರ್ಚಾ ಘಟಕ ದೂರು ದಾಖಲಿಸಿದ್ದು, ಖಾದರ್ ಮಾತಿನ ತುಣಕನ್ನೂ ಸಹ ಸಾಕ್ಷಿಯನ್ನಾಗಿ ಪೊಲೀಸ್ ಕಮಿಷನರ್ ಅವರಿಗೆ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.
ಮಂಗಳವಾರ ಕಾಂಗ್ರೆಸ್ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ್ದ ಖಾದರ್, ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ರಾಜ್ಯದಲ್ಲಿ ಜಾರಿಯಾದರೆ ಕರ್ನಾಟಕ ಹೊತ್ತಿ ಉರಿಯುತ್ತದೆ ಎಂದು ಪ್ರಚೋಚದನಾಕಾರಿ ಹೇಳಿಕೆ ನೀಡಿದ್ದರು.
ನಿನ್ನೆ ಮಂಗಳೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಇದನ್ನು ನಿಯಂತ್ರಿಸಲು ಗೋಲಿಬಾರ್ ಮಾಡಲಾಗಿದೆ. ಪರಿಣಾಮವಾಗಿ ಇಬ್ಬರು ಮೃತರಾಗಿದ್ದು, ಗಲಭೆಯಲ್ಲಿ ಹಲವು ಪೊಲೀಸರೂ ಸಹ ಗಾಯಗೊಂಡಿದ್ದಾರೆ. ಪುಂಡರ ಹಾವಳಿಗೆ ಬಹಳಷ್ಟು ಸಾರ್ವಜನಿಕ ಆಸ್ತಿ ಹಾನಿಯಾಗಿದೆ.
Get in Touch With Us info@kalpa.news Whatsapp: 9481252093
Discussion about this post