ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಮಣಿಪಾಲ: ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರ ಆರೋಗ್ಯವನ್ನು ಪ್ರಧಾನಿ ನರೇಂದ್ರ ಮೋದಿ ವಿಚಾರಿಸಿದ್ದಾರೆ.
ಶ್ರೀಗಳ ಆಪ್ತ ಕಾರ್ಯದರ್ಶಿಯವರಿಗೆ ಕರೆ ಮಾಡಿ ಮಾತನಾಡಿರುವ ಪ್ರಧಾನಿಯವರು, ಗುರುಗಳ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.
ಇನ್ನು, ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀಗಳನ್ನು ಭೇಟಿಯಾಗಿ, ಆರೋಗ್ಯ ವಿಚಾರಿಸುವ ಸಲುವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಾಳೆ ಉಡುಪಿಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.
ಆದರೆ, ಈ ಕುರಿತಂತೆ ಅಧಿಕೃತ ಮಾಹಿತಿಗಳು ಬಿಡುಗಡೆಯಾಗಿಲ್ಲವಾದರೂ, ಪ್ರಧಾನಿಯವರ ಸೂಚನೆ ಹಿನ್ನೆಲೆಯಲ್ಲಿ ಅಮಿತ್ ಶಾ ಆಗಮಿಸಲಿದ್ದಾರೆ ಎಂದು ಹೇಳಲಾಗಿದೆ.
Get in Touch With Us info@kalpa.news Whatsapp: 9481252093
















