ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ರಾಂಚಿ: ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ ಈಗಾಗಲೇ ಬಹುತೇಕ ಹೊರಬಿದ್ದಿದ್ದು, ಕಾಂಗ್ರೆಸ್-ಜೆಎಂಎಂ ಮೈತ್ರಿಕೂಟ ಅಧಿಕಾರದತ್ತ ಹೆಜ್ಜೆ ಹಾಕಿದ್ದು, ಆಡಳಿತಾರೂಢ ಬಿಜೆಪಿಗೆ ಭಾರೀ ಮುಖಭಂಗವಾಗಿದೆ.
ಒಟ್ಟು 81 ಕ್ಷೇತ್ರಗಳಲ್ಲಿ ಕಾಂಗ್ರೆಸ್ 12 ಸ್ಥಾನಗಳನ್ನು, ಅದರ ಮೈತ್ರಿ ಪಕ್ಷ ಜೆಎಂಎಂ 25, ಬಿಜೆಪಿ 30, ಇತರರು 10 ಸ್ಥಾನಗಳನ್ನು ಗೆದ್ದಿದ್ದು, ಕಾಂಗ್ರೆಸ್-ಜೆಎಂಎಂ ಮೈತ್ರಿಕೂಟ ಅಧಿಕಾರದತ್ತ ಹೆಜ್ಜೆ ಹಾಕಿದೆ. ಇದೇ ವೇಳೆ ಆಡಳಿತಾರೂಢ ಬಿಜೆಪಿಗೆ ಭಾರೀ ಹಿನ್ನಡೆ ಉಂಟಾಗಿದೆ.
ಇನ್ನು, ಫಲಿತಾಂಶದ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಎಂಎಂ ಮೈತ್ರಿ ಸರ್ಕಾರ ರಚನೆಯಾಗುವುದು ಬಹುತೇಕ ನಿಶ್ಚಿತವಾಗಿದ್ದು, ಜೆಎಂಎಂ ನಾಯಕ ಹೇಮಂತ್ ಸೊರೇನ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ.
ಅಲ್ಲದೇ, ಮಹಾಘಟಬಂಧನದ ಆಧಾರದಲ್ಲಿ ಮೈತ್ರಿ ಸರ್ಕಾರದೊಂದಿಗೆ ಆರ್’ಜೆಡಿ ಸಹ ಸೇರಿಕೊಳ್ಳಲಿದೆ ಎಂದು ವರದಿಯಾಗಿದೆ.
Get in Touch With Us info@kalpa.news Whatsapp: 9481252093
















