ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ವಿರೋಧಿಸುವವರು ಶಾಂತ ರೀತಿಯಿಂದ ಪ್ರತಿಭಟಿಸಿ. ಬದಲಾಗಿ ಹಿಂಸಾಮಾರ್ಗ ಅನುಸರಿಸಿದರೆ ಕಾನೂನು ರೀತಿಯಲ್ಲಿ ಕಠಿಣ ಕ್ರಮ ಅನಿವಾರ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕಾನೂನಿನ ಚೌಕಟ್ಟಿನಲ್ಲಿ ಯಾರಿಗೂ ತೊಂದರೆಯಾಗದಂತೆ ರೂಪಿಸಲಾಗಿದ್ದು, ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿಯವರೂ ಸಹ ನಿನ್ನೆ ಸ್ಪಷ್ಟನೆ ನೀಡಿದ್ದಾರೆ ಎಂದರು.
ಮಂಗಳೂರು ಗೋಲಿಬಾರ್ ವಿಚಾರವಾಗಿ ಮಾತನಾಡಿದ ಅವರು, ಕೇರಳದಿಂದ ಬಂದ ಕೆಲವು ಮಂದಿ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ದೊಂಬಿ ಮಾಡಿದ್ದಾರೆ. ಪೊಲೀಸ್ ಠಾಣೆಗೆ ನುಗ್ಗಿ ಶಸ್ತ್ರಾಸ್ತ್ರ ತೆಗೆದುಕೊಳ್ಳಲು ಮುಂದಾಗಿದ್ದರು. ಈ ಹಂತದಲ್ಲಿ ಗೋಲಿಬಾರ್ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಕಾಯ್ದೆ ವಿಚಾರವಾಗಿ ಅಲ್ಪ ಸಂಖ್ಯಾತರಲ್ಲಿ ಉದ್ದೇಶಪೂರ್ವಕವಾಗಿ ಗೊಂದಲ ಮೂಡಿಸಿ, ಶಾಂತಿಗೆ ಭಂಗ ತರುವ ಕೃತ್ಯಗಳನ್ನು ಮಾಡಲಾಗುತ್ತಿದೆ ಎಂಬ ಮಾಹಿತಿ ಸರ್ಕಾರಕ್ಕೆ ಬಂದಿದೆ. ಮಂಗಳೂರು ಘಟನೆಯಲ್ಲೂ ಸಹ ಉದ್ದೇಶಪೂರ್ವಕವಾಗಿ ಗಲಭೆ ನಡೆಸಲಾಗಿದೆ. ಹೀಗಾಗಿ, ಸಿಐಡಿ ಹಾಗೂ ಮ್ಯಾಜಿಸ್ಟ್ರೇಟ್ ತನಿಖೆಗೆ ಈಗಾಗಲೇ ಆದೇಶಿಸಲಾಗಿದೆ ಎಂದಿದ್ದಾರೆ.
Get in Touch With Us info@kalpa.news Whatsapp: 9481252093







Discussion about this post