ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಮಣಿಪಾಲ: ಅನಾರೋಗ್ಯದ ಹಿನ್ನೆಲೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಮಠದ ಶ್ರೀವಿಶ್ವೇಶ ತೀರ್ಥ ಶ್ರೀಪಾದಂಗಳವರ ಆರೋಗ್ಯ ಪೂರ್ಣ ಚೇತರಿಕೆಗಾಗಿ ಇನ್ನೂ ಹೆಚ್ಚಿನ ಸಮಯ ಬೇಕಿದ್ದು, ಆಸ್ಪತ್ರೆಗೆ ವಿಐಪಿ ಭಕ್ತ ಬಾರದೇ ಇದ್ದರೆ ಒಳಿತು ಎಂದು ಮಣಿಪಾಲ ಆಸ್ಪತ್ರೆ ವೈದ್ಯರು ಹೇಳಿದ್ದಾರೆ.
ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಹಾಗೂ , ಸ್ವಾಮಿಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಆದರೆ, ಅವರ ಆರೋಗ್ಯ ಸಂಪೂರ್ಣ ಗುಣವಾಗಲು ಕನಿಷ್ಠ ಒಂದು ತಿಂಗಳ ಕಾಲ ಚಿಕಿತ್ಸೆ ನೀಡಬೇಕಾಗಬಹುದು ಎಂದಿದ್ದಾರೆ.
ಶ್ರಿಗಳ ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಇದ್ದರೂ, ಸ್ಥಿರವಾಗಿದೆ. ಅವರಿಗೆ ತುಂಬಾ ವಯಸ್ಸಾದ ಕಾರಣ ಇನ್ನಷ್ಟು ಕಾಲ ವೆಂಟಿಲೇಟರ್’ನಲ್ಲೇ ಚಿಕಿತ್ಸೆ ನೀಡಬೇಕಾಗುತ್ತದೆ ಎಂದಿದ್ದಾರೆ.
ಅತ್ಯಂತ ಪ್ರಮುಖವಾಗಿ, ಶ್ರಿಗಳನ್ನು ನೋಡಲು ವಿಐಪಿಗಳು ಒಬ್ಬೊಬ್ಬರಾಗಿ ಆಗಮಿಸುತ್ತಿದ್ದರೆ ಚಿಕಿತ್ಸೆ ನೀಡಲು ವೈದ್ಯರು ಹಾಗೂ ತಂಡಕ್ಕೆ ತೊಂದರೆಯಾಗುತ್ತದೆ. ಹೀಗಾಗಿ, ದಯಮಾಡಿ ಯಾವ ವಿಐಪಿ ಭಕ್ತರೂ ಸಹ ಆಸ್ಪತ್ರೆಗೆ ಬಾರದೇ ಇದ್ದರೆ ಒಳಿತಾಗುತ್ತದೆ ಎಂದು ಮನವಿ ಮಾಡಿದ್ದಾರೆ.
Get in Touch With Us info@kalpa.news Whatsapp: 9481252093














