ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಮಕರ ಸಂಕ್ರಾಂತಿಗೆ ಭಾರತೀಯ ಸಂಸ್ಕೃತಿಯಲ್ಲಿ ಮಹತ್ವದ ಸ್ಥಾನವಿದೆ. ಜಗದ ಅಧಿನಾಯಕ ಸೂರ್ಯ ತನ್ನ ಪಥ ಬದಲಿಸುವ ಪೂರ್ವಕಾಲವನ್ನೇ ನಾವು ಸಂಕ್ರಾತಿ ಎಂದು ಕರೆಯುತ್ತೇವೆ. ದೈನಂದಿನ ಸಾಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿದುವಂತದ್ದೆ ‘‘ಹಬ್ಬಗಳು’’ ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ, ಪ್ರೀತಿಯಿಂದ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡದ ಜೀವನದಲ್ಲಿ ತೊಡಗಿದ್ದಾಗಲೂ ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು.
ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ ಸೀಮಿತವಾದುದಲ್ಲ. ಎಲ್ಲಾ ಧರ್ಮಗಳಲ್ಲೂ ಅವರ ಆಚರಣೆಗೆ ತಕ್ಕಂತೆ ಹಬ್ಬಗಳಿರುವುದನ್ನು ಗಮನಿಸಬಹುದು. ಜಾತ್ಯತೀತ ರಾಷ್ಟ್ರವಾದ ನಮ್ಮ ಭಾರತದಲ್ಲಂತೂ ಜಗತ್ತಿನಲ್ಲಿ ಎಲ್ಲಿಯೂ ಇಲ್ಲದ ವೈವಿಧ್ಯಮಯವಾದ ಹಬ್ಬಹರಿದಿನಗಳನ್ನು ಕಾಣಬಹುದು.
ಸಂಕ್ರಾಂತಿ ಸೂರ್ಯರಾಧನೆಯ ಹಬ್ಬವಾಗಿದೆ. ಮಕರ ಸಂಕ್ರಾಂತಿ ಪ್ರಸಿದ್ದವಾಗಿರುವ ಸುಗ್ಗಿಯ ಕಾಲದ ಹಬ್ಬ. ಇದನ್ನು ಪೊಂಗಲ್ ಎಂದು ಕರೆಯಲಾಗುತ್ತದೆ. ಪೊಂಗಲ್ ಎಂದರೆ ಅಕ್ಕಿ ತುಪ್ಪ, ಹಾಲು, ಸಕ್ಕರೆ ಅಥವಾ ಬೆಲ್ಲಗಳಿಂದ ಮಾಡಿದ ಸಿಹಿ ಖ್ಯಾದ. ಸುಗ್ಗಿಯ ಉತ್ಪನ್ನಗಳಿಂದ ಮಾಡಿದ ಇದನ್ನು ಸೂರ್ಯದೇವನಿಗೆ ನೈವೇದ್ಯ ಮಾಡಲಾಗುತ್ತದೆ.
ಪೌರಾಣಿಕ ಹಿನ್ನಲೆ
ಎಲ್ಲಾ ಚಟುವಟಿಕೆಗಳಿಗೂ ಆಧಾರಪ್ರಾಯವಾದ ಸೂರ್ಯನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಪ್ರವೇಶಿಸುವ ಕಾಲವನ್ನು ‘‘ಸಂಕ್ರಮಣ ಅಥವಾ ಸಂಕ್ರಾಂತಿ’’ ಎಂದು ಜ್ಯೋತಿಷ್ಯಾಧಾರದ ಮೇಲೆ ಪರಿಗಣಿಸಲಾಗುವುದು. ಸಂಕ್ರಾಂತಿಯು ಒಂದು ವಿಧದಲ್ಲಿ ಸೂರ್ಯನ ಆರಾಧನೆಯಾಗಿದ್ದು.
ಉತ್ತರಾಯಣ ದಕ್ಷಿಣಾಯಣಗಳ ಪ್ರಾರಂಭದ ದಿನವಾದ್ದರಿಂದ ಹೆಚ್ಚಿನ ಮಹತ್ವವನ್ನು ಪಡೆದಿದೆ. ಸಾಮಾನ್ಯವಾಗಿ ಸುಗ್ಗಿಯ ಸಂದರ್ಭದಲ್ಲಿ ಆಚರಿಸುವ ಸಂಕ್ರಾಂತಿ ಹಬ್ಬವು ಭಾರತೀಯ ಕಾಲಮಾನ ಪುಷ್ಯ ಮಾಸದಲ್ಲಿ ಬರುವುದು.
ಉತ್ತರಾಯಣದ ಪುಣ್ಯಕಾಲವೆಂದೂ(ದೇವತೆಗಳ ಕಾಲವೆಂದೂ) ಸಹ ಕರೆಯಲಾಗುತ್ತದೆ. ಈ ಹಬ್ಬದ ಸಂದರ್ಭದಲ್ಲಿ ಭಕ್ತರು ಪುಣ್ಯ ಕಾಲವೆಂದೂ ಸಹ ಹೇಳಲಾಗುತ್ತದೆ. ಈ ಹಬ್ಬದ ಸಂದರ್ಭದಲ್ಲಿ ಭಕ್ತರು ಪುಣ್ಯ ನದಿಗಳೆಂದು ಹೆಸರುವಾಸಿಯಾದ ಗಂಗಾ, ಕಾವೇರಿ ಮೊದಲಾದವುಗಳಲ್ಲಿ ಸ್ನಾನ ಮಾಡುವುದು ಉಂಟು.
ಸೂರ್ಯನು ಈವರೆಗೆ ದಕ್ಷಿಣದತ್ತ ವಾಲಿ ಚರಿಸುತ್ತಿದ್ದದ್ದು, ಸಂಕ್ರಾಂತಿ ದಿನವಿದ್ದು ಉತ್ತರದ ಕಡೆ ಪಥ ಬದಲಾಯಿಸುತ್ತಾನೆ. ಈ ರೀತಿ ಸೂರ್ಯನು ಪಥ ಬದಲಾವಣೆಯಿಂದ ಭಾರತದಲ್ಲಿ ಕೊರೆಯುವ ಚಳಿ ಕಡಿಮೆಯಾಗಿ ಹಗಲು ಹೆಚ್ಚು ಸಂಭವಿಸುತ್ತದೆ ಎಂಬ ಪ್ರತೀತಿ ಇದೆ.
ಶಾಸ್ತ್ರ ದೃಷ್ಟಿಯಿಂದ ಈ ಹಬ್ಬದಂದು ಕಪ್ಪು ಎಳ್ಳಿನಿಂದ ಸ್ನಾನಮಾಡಿ ಬ್ರಾಹ್ಮಣರಿಗೆ ಎಳ್ಳುದಾನ ಮಾಡುತ್ತಾರೆ. ಈ ದಿನ ಮಾಡಿದ ದಾನದಿಂದ ಸೂರ್ಯನು ಆಜನ್ಮ ಪರ್ಯಂತ ಅನುಗ್ರಹಿಸುತ್ತಾನೆಂಬ ನಂಬಿಕೆಯು ಇದೆ.
ಆಚರಣೆ
ಸಂಕ್ರಾಂತಿ ಹಬ್ಬದಲ್ಲಿ ಪೊಂಗಲ್, ಎಳ್ಳು-ಬೆಲ್ಲ ಪ್ರಮುಖ ವಿಶೇಷ. ಇವೆರಡೂ ಇಲ್ಲದಿದ್ದರೆ ಸಂಕ್ರಾಂತಿ ಪರಿಪೂರ್ಣಗೊಳ್ಳುವುದೂ ಇಲ್ಲ, ಕಳೆಗಟ್ಟುವುದೂ ಇಲ್ಲ. ತಟ್ಟೆಯಲ್ಲಿ ಎಳ್ಳು-ಬೆಲ್ಲ, ಕೊಬ್ಬು, ಅರಿಶಿಣ-ಕುಂಕುಮ ಇಟ್ಟುಕೊಂಡು ಸಾಂಪ್ರದಾಯಿಕ ಉಡುಗೆ ತೊಟ್ಟು, ಮುಗುಳ್ನಗುತ್ತಾ ಮನೆಮನೆಗೂ ಎಳ್ಳು-ಬೆಲ್ಲ ಕೊಟ್ಟು ಎಳ್ಳು ಬೆಲ್ಲ ತಿಂದು ಒಳ್ಳೆ ಮಾತನಾಡು ಎಂದು ಹೇಳುತ್ತಾ ಹಿರಿಯರ ಕಾಲಿಗೆ ಬಿದ್ದು, ಅಶೀರ್ವಾದ ಪಡೆದುಕೊಳ್ಳುವುದು ಶತಮಾನದಿಂದಲೂ ನಡೆದುಕೊಂಡು ಬಂದಿರುವ ಆಚರಣೆ.
ಕರ್ನಾಟಕದಲ್ಲಿ ಎಳ್ಳು, ಸಕ್ಕರೆ-ಅಚ್ಚುಗಳನ್ನು ನೆರೆಯವರಿಗೆ ಬಂಧು ಮಿತ್ರರಿಗೆ ಹಂಚುವ ನಲ್ಮೆಯ ಸಾಮಾಜಿಕ ಸಂಪ್ರದಾಯ ಈ ಹಬ್ಬದ ಒಂದು ವಿಶೇಷ. ದನಕರುಗಳಿಗೆ ಮೈತೊಳೆದು-ಭೂತಪೀಡೆಗಳಿಂದ ಅವುಗಳನ್ನು ರಕ್ಷಿಸುವ ಸಲುವಾಗಿ ಬೀದಿಗಳಲ್ಲಿ ಹೊತ್ತಿಸಿದ ನೆಗೆದು ದಾಟಿಸುವುದು ಉಂಟು. ಸಂಕ್ರಾಂತಿ ಹಬ್ಬವನ್ನು ಎಲ್ಲಾರು ಹೆಚ್ಚು ಸಂಭ್ರಮದಿಂದ ಆಚರಿಸುವಂತಹ ಹಬ್ಬವಾಗಿದೆ ಎಂದರೆ ತಪ್ಪಾಗಲಾರದು.
Get in Touch With Us info@kalpa.news Whatsapp: 9481252093
Discussion about this post