ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮದ ಅಂಗವಾಗಿ ಜನವರಿ 19ರಂದು ಜಿಲ್ಲೆಯಾದ್ಯಂತ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಿದೆ.
ಐದು ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಲಸಿಕೆ ಹಾಕಿಸಿದ್ದರೂ ಜ.19ರಂದು ಮರೆಯದೇ ಪೋಲಿಯೋ ಲಸಿಕೆ ಹಾಕಿಸಿ. ಪೋಲಿಯೋ ರೋಗ ಮಕ್ಕಳಿಗೆ ಅಂಗವಿಕತೆ ಉಂಟು ಮಾಡಬಹುದಾಗಿದೆ. ಪೋಲಿಯೋ ಲಸಿಕೆ ಹಾಕಿಸುವುದರಿಂದ ಮಾತ್ರ ಮಕ್ಕಳನ್ನು ರಕ್ಷಿಸಲು ಸಾಧ್ಯವಾಗಲಿದೆ.
ಶಾಲೆ, ಅಂಗನವಾಡಿ ಕೇಂದ್ರಗಳಲ್ಲಿ ತೆರೆದಿರುವ ಲಸಿಕಾ ಕೇಂದ್ರಗಳಲ್ಲಿ ಜ.19ರಂದು ಬೆಳಿಗ್ಗೆ 8ರಿಂದ ಸಂಜೆ 5ರವರೆಗೆ ಲಸಿಕೆ ಹಾಕಲಾಗುವುದು.
ಶಿವಮೊಗ್ಗದ ಬಸ್ ನಿಲ್ದಾಣದಲ್ಲಿಯೂ ಲಸಿಕಾ ಕೇಂದ ತೆರೆದಿರುತ್ತದೆ. ಸಾರ್ವಜನಿಕರು ಈ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗೀಹಳ್ಳಿ ತಿಳಿಸಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post