ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಸ್ಯಾಂಡಲ್’ವುಡ್’ನಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರದ ತಂತ್ರಜ್ಞರಿಗೆ ಸ್ವತಃ ಅವರೇ ಭರ್ಜರಿ ಗಿಫ್ಟ್ ನೀಡುವ ಮೂಲಕ ಚಂದನವನದಲ್ಲಿ ಹೊಸ ಸಂಚಲನ ಸೃಷ್ಠಿಸಿದ್ದಾರೆ.
ಸುಮಾರು 108 ದಿನಗಳ ದೇಶ ಹಾಗೂ ವಿದೇಶಗಳಲ್ಲಿ ಚಿತ್ರೀಕರಣವನ್ನು ಯಶಸ್ವಿಯಾಗಿ ಮುಗಿಸಿರುವ ಚಿತ್ರತಂಡ ಈಗ ಪೋಸ್ಟ್ ಪ್ರೊಡಕ್ಷನ್ ವರ್ಕ್ ಆರಂಭಿಸಿದೆ.
ಚಿತ್ರೀಕರಣ ಮುಕ್ತಾಯವಾಗಿ ಮೇಕಿಂಗ್ ಲಕ್ಷುರಿಯಾಗಿ ಬಂದಿರುವ ಹಿನ್ನೆಲೆಯಲ್ಲಿ ಸಂತಸಗೊಂಡಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಚಿತ್ರತಂಡದವರಿಗೆ ಹಲವು ಉಡುಗೊರೆಗಳನ್ನು ನೀಡಿದ್ದಾರೆ.
ಇನ್ನು, ದರ್ಶನ್ ಜೊತೆ ಅಶಾ ಭಟ್ ನಾಯಕಿಯಾಗಿ ನಟಿಸಿದ್ದರೆ, ತೆಲುಗು ನಟ ಜಗಪತಿ ಬಾಬು ಖಳನಾಯಕನಾಗಿ ಕಾಣಿಸಿಕೊಂಡಿದ್ದಾರೆ. ವಿನೋದ್ ಪ್ರಭಾಕರ್, ಚಿಕ್ಕಣ್ಣ, ಸೋನಾಲ್, ರವಿ ಕಿಶನ್, ಶಿವರಾಜ್ ಕೆ ಆರ್ ಪೇಟೆ ಸೇರಿದಂತೆ ಹಲವು ಕಲಾವಿದರು ಚಿತ್ರದಲ್ಲಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post