ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಗೌರಿಬಿದನೂರು: ತಾಲೂಕಿನ ಮಂಚೇನಹಳ್ಳಿಯಲ್ಲಿ ನೇತಾಜಿ ಜನ್ಮ ದಿನಾಚರಣೆಯ ಅಂಗವಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ತಾಲೂಕಿನ ಮೇಳ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಸ್ಥರದ ಬಹುಮಾನಗಳನ್ನು ಪಡೆದಿದ್ದಾರೆ.
ಗೌತಮಿ ಗುಂಡು ಎಸೆತದಲ್ಲಿ ಪ್ರಥಮ, ಆಕಾಶ್ ಚಿತ್ರಕಲೆ ಪ್ರಥಮ, ಸುಶ್ಮಿತ ಮತ್ತು ಹೇಮಲತ ರಸಪ್ರಶ್ನೆ ದ್ವಿತೀಯ, ಸಿಂಧು ಚಿತ್ರಕಲೆ ದ್ವಿತೀಯ, ಪ್ರವೀಣ್ ಮತ್ತು ರಮ್ಯ ಚಕ್ರ ಎಸೆತದಲ್ಲಿ ತೃತೀಯ, ಪವಿತ್ರ, ನಯಾಜ್ ಮತ್ತು ಸಂತೋಷ್ ಚಿತ್ರಕಲೆಯಲ್ಲಿ ತೃತೀಯ ಬಹುಮಾನ ಪಡೆದಿದ್ದಾರೆ.
ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಪಡೆದ ವಿದ್ಯಾರ್ಥಿಗಳನ್ನು ಶಾಲಾ ಎಸ್’ಡಿಎಂಸಿ ಮಂಡಳಿ ಹಾಗೂ ಶಿಕ್ಷಕರು ಅಭಿನಂಧಿಸಿದ್ದಾರೆ.
(ವರದಿ: ಬಿ.ಎಂ. ಅಜಯ್, ಗೌರಿಬಿದನೂರು)
Get in Touch With Us info@kalpa.news Whatsapp: 9481252093















