ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ಭಾರತೀಯ ಸೇನೆಯಲ್ಲಿ ಮಹಿಳಾ ಕಮಾಂಡರ್ ಹುದ್ದೆ ನೀಡಬೇಕು ಎಂದು ದೆಹಲಿ ಹೈಕೋರ್ಟ್ ನೀಡರುವ ಆದೇಶವನ್ನು ಸುಪ್ರೀಂ ಕೋರ್ಟ್ ಇಂದು ಎತ್ತಿ ಹಿಡಿದಿದೆ.
ಈ ಕುರಿತಂತೆ ಇಂದು ಆದೇಶ ನೀಡಿರುವ ಸರ್ವೋಚ್ಛ ನ್ಯಾಯಾಲಯ, ಸೇನೆಯಲ್ಲಿ ಮಹಿಳಾ ಕಮಾಂಡರ್ ಹುದ್ದೆಗೆ ನೇಮಕ ಮಾಡಬೇಕು. ಮಹಿಳಾ ಅಧಿಕಾರಿಗಳನ್ನು ನೇಮಕಾತಿ ಮಾಡಿಕೊಳ್ಳುವ ಸಂದರ್ಭದಲ್ಲಿಯೇ ಪುರುಷರ ನೇಮಕಾತಿಯ ನಿಬಂಧನೆಗಳ ಪ್ರಕಾರವೇ ಮಾಡಬೇಕು ಎಂದಿದೆ.
ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಮಹಿಳಾ ಅಧಿಕಾರಿಗಳಿಗೆ ಪರ್ಮನೆಂಟ್ ಕಮಿಷನ್ ಅನ್ವಯವಾಗಲಿದೆ ಎಂದಿರುವ ನ್ಯಾಯಾಲಯ, ಸೇನೆಯಲ್ಲಿ ಮಹಿಳೆಯರಿಗೆ ಕಮಾಂಡರ್ ಹುದ್ದೆ ನೀಡಬೇಕೆಂಬ ದೆಹಲಿ ಹೈಕೋರ್ಟ್ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.
Get in Touch With Us info@kalpa.news Whatsapp: 9481252093














