ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಗೌರಿಬಿದನೂರು: ವಿದ್ಯಾರ್ಥಿಗಳು ಶಾಲಾ ಹಂತದಲ್ಲಿಯೇ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಿಕೊಂಡು ಆಸಕ್ತಿದಾಯಕ ಅಧ್ಯಯನದ ಮೂಲಕ ಯಶಸ್ಸಿನ ಬೆನ್ನೇರಬೇಕಾಗಿದೆ ಎಂದು ಸ್ಮೃತಿ ಕ್ರಿಯೇಷನ್ಸ್ ವ್ಯವಸ್ಥಾಪಕರಾದ ಎ.ಎಸ್. ಜಗನ್ನಾಥ್ ತಿಳಿಸಿದರು.
ನಗರದಲ್ಲಿ ಸ್ಮೃತಿ ಕ್ರಿಯೇಷನ್ಸ್ ವತಿಯಿಂದ ಆದರ್ಶ ವಿದ್ಯಾಲಯದ ಪ್ರವೇಶ ಪರೀಕ್ಷೆಗಾಗಿ ಆಯೋಜಿಸಿದ್ದ ಪೂರ್ವ ಸಿದ್ದತಾ ತರಬೇತಿ ಕಾರ್ಯಾಗಾರವನ್ನು ಉದ್ಧೇಶಿಸಿ ಅವರು ಮಾತನಾಡಿದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಬೆಳೆವಣಿಗೆಯ ಜೊತೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಸಾಮರ್ಥ್ಯವನ್ನು ಬೆಳೆಸಬೇಕಾಗಿದೆ. ಇದರಿಂದ ಮುಂದೆ ಉನ್ನತ ಮಟ್ಟದ ಅಧಿಕಾರಿಯಾಗಿ ಸಮಾಜದ ಏಳಿಗೆಗೆ ಶ್ರಮಿಸಲು ಸಹಕಾರಿಯಾಗುತ್ತದೆ. ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಆಸಕ್ತಿಯಿಂದ ಕಲಿತಲ್ಲಿ ನಿರ್ಧಿಷ್ಟ ಗುರಿಯನ್ನು ಮುಟ್ಟಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಲಯನ್ಸ್ ಸಂಸ್ಥೆಯ ಅಧ್ಯಕ್ಷರಾದ ಪ್ರೊ.ಕೆ. ರಾಮಾಂಜನೇಯಲು ಮಾತನಾಡಿ, ಮಕ್ಕಳಲ್ಲಿ ಪ್ರಾಥಮಿಕ ಹಂತದಲ್ಲಿ ಕಲಿಸುವ ಶಿಕ್ಷಣವು ಕೇವಲ ಅಂಕಗಳನ್ನು ಪಡೆಯಲು ಸಹಕಾರಿಯಾಗುವುದಲ್ಲದೆ ಅವರ ಮುಂದಿನ ಭವಿಷ್ಯವನ್ನು ಉಜ್ವಲಗೊಳಿಸಲು ಕಾರಣವಾಗಬೇಕು. ಅದು ಸಮಾಜದ ಸ್ವಾಸ್ಥ್ಯ ಹಾಗೂ ಬದುಕಿನ ನಿಜವಾದ ಅರ್ಥವನ್ನು ಅರಿತು ಮಾನವೀಯ ಮೌಲ್ಯಗಳನ್ನು ಬೆಳೆಸಬೇಕಾಗಿದೆ. ಇದಕ್ಕಾಗಿ ಶಿಕ್ಷಣ ಕ್ಷೇತ್ರದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸುವುದು ಅತ್ಯವಶ್ಯಕವಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ತಾಲೂಕು ಹಿಂದುಳಿದ ವರ್ಗಗಳ ಇಲಾಖೆಯ ವಿಸ್ತರಣಾಧಿಕಾರಿ ನಾಗರಾಜ್, ವಕೀಲರಾದ ಅರುಣ್ ಕುಮಾರ್, ಮುಖಂಡರಾದ ಹೋಟೆಲ್ ರಮೇಶ್ ಬಾಬು ಭಾಗವಹಿಸಿ ಮಕ್ಕಳಿಗೆ ಸಲಹೆ ಮತ್ತು ಮಾರ್ಗದರ್ಶನ ನೀಡಿದರು.
(ವರದಿ: ಬಿ.ಎಂ. ಅಜಯ್, ಗೌರಿಬಿದನೂರು)
Get in Touch With Us info@kalpa.news Whatsapp: 9481252093
Discussion about this post