ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಗೌರಿಬಿದನೂರು: ತಾಲೂಕಿನಲ್ಲಿರುವ ಮುಜರಾಯಿ ಇಲಾಖೆಗೆ ಸೇರಿದ ಪುರಾಣ ಪ್ರಸಿದ್ಧ ಮುದಗಾನಕುಂಟೆ ಶ್ರೀ ಗಂಗಾ ಭಗೀರಥಿ ದೇವಾಲಯದ ಕಾಮಗಾರಿಯ ಗುಣಮಟ್ಟ ಕಾಪಾಡುವಂತೆ ಜಿಲ್ಲಾಧಿಕಾರಿ ಆರತಿ ಆನಂದ್ ಸೂಚಿಸಿದ್ದಾರೆ.
ದೇವಾಲಯದ ಕಾಮಗಾರಿ ಆವರಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಗಂಗಾ ಭಗೀರಥಿ ದೇವಾಲಯಕ್ಕೆ ಇತ್ತೀಚೆಗೆ 1.60 ಕೋಟಿ ಮೊತ್ತದ ಅನುದಾನದ ಬಿಡುಗಡೆ ಮಾಡಲಾಗಿದೆ. ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡುವ ಜೊತೆಯಲ್ಲಿ ದೇವಾಲಯದ ಆವರಣದಲ್ಲಿನ ಸ್ವಚ್ಛತೆ ಕಾಪಾಡಬೇಕು ಎಂದರು.
ಭಕ್ತಾದಿಗಳಿಗೆ ಅನುಕೂಲಕರವಾಗುವ ಕಾಮಗಾರಿಗಳನ್ನು ಕೂಡಲೇ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ರಾಜಣ್ಣ ಇಂಜಿನಿಯರ್ ಶಿವಕುಮಾರ್ ಹಾಗೂ ದೇವಸ್ಥಾನದ ಸಿಬ್ಬಂದಿ ಇದ್ದರು.
(ವರದಿ: ಬಿ.ಎಂ. ಅಜಯ್, ಗೌರಿಬಿದನೂರು)
Get in Touch With Us info@kalpa.news Whatsapp: 9481252093















