ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಬಹುತೇಕ ನೆನಗುದಿಗೆ ಬಿದ್ದಿದ್ದ ಶಿವಮೊಗ್ಗ-ಚಿತ್ರದುರ್ಗ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಹೆಚ್ಚುವರಿಯಾಗಿ 500 ಕೋಟಿ ರೂ. ಅನುದಾನ ನೀಡಲಾಗುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.
ಈ ಕುರಿತಂತೆ ಮಾಹಿತಿ ನೀಡಿರುವ ಅವರು, ಶಿವಮೊಗ್ಗ-ಚಿತ್ರದುರ್ಗ ರಸ್ತೆ ಹಿಂದಿನ ಕಾಮಗಾರಿಯಲ್ಲಿ 100 ಕೋಟಿ ರೂ. ಮಾತ್ರ ಉಳಿದಿತ್ತು. ಇದಕ್ಕೆ ಇನ್ನೂ 500 ಕೋಟಿ ರೂ. ಹೆಚ್ಚುವರಿಯಾಗಿ ಅನುದಾನ ನೀಡಿ ಅಭಿವೃದ್ಧಿಪಡಿಸಲಾಗುತ್ತದೆ. ಈ ಮಾರ್ಗದ ಎಲ್ಲಾ ಗ್ರಾಮಗಳಲ್ಲಿ ಬೈಪಾಸ್ ಮಾಡಿ ರಸ್ತೆ ಕಾಮಗಾರಿ ನಡೆಯಲಿದೆ ಎಂದರು.
ಫೆ.24ರಂದು ಉದ್ಯೋಗ ಮೇಳ
ಫೆ.24 ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶಿವಮೊಗ್ಗಕ್ಕೆ ಆಗಮಿಸಲಿದ್ದು, ಅಂದು ಬೆಳಗ್ಗೆ 9 ಗಂಟೆಗೆ ಉದ್ಯೋಗ ಮೇಳವನ್ನು ಉದ್ಘಾಟಿಸಲಿದ್ದಾರೆ . ಕಾರ್ಮಿಕ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ಉದ್ಯೋಗ ಮೇಳದಲ್ಲಿ ನೂರಾರು ಕಂಪನಿಗಳು ಇದರಲ್ಲಿ ಭಾಗಿಯಾಗಲಿವೆ ಎಂದು ತಿಳಿಸಿದರು.
ಸೊರಬ ನೀರಾವರಿ ಯೋಜನೆಗೆ ಶಂಕುಸ್ಥಾಪನೆ
ಅದೇ ದಿನ ಹನ್ನೊಂದು ಗಂಟೆಗೆ ಸೊರಬದಲ್ಲಿ ಮೂಗೂರು ಮತ್ತು ಮೂಡಿ ಏತ ನೀರಾವರಿ ಯೋಜನೆಗೆ ಯಡಿಯೂರಪ್ಪನವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸಂಜೆ ನಾಲ್ಕು ಗಂಟೆಗೆ ಶಿಕಾರಿಪುರದಲ್ಲಿ ಶಿಕಾರಿಪುರ ತಾಲೂಕಿನ ನೀರಾವರಿ ಯೋಜನೆಗಳಿಗೂ ಶಂಕುಸ್ಥಾಪನೆ ನೆರವೇರಲಿದೆ ಎಂದರು ತಿಳಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ.ಡಿ. ಮೇಘರಾಜ್ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್. ದತ್ತಾತ್ರಿ ವಿಭಾಗೀಯ ಪ್ರಮುಖ ಗಿರೀಶ್ ಪಟೇಲ್, ಕಾರ್ಯದರ್ಶಿ ಬಿ.ಆರ್. ಮದುಸೂಧನ್, ಶ್ರೀಕಾಂತ್ ಇದ್ದರು.
Get in Touch With Us info@kalpa.news Whatsapp: 9481252093

















