ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಳ್ಳಕೆರೆ: ಅಮೂಲ್ಯ ಲಿಯೋನ್ ಎಂಬಾಕೆ ಪಾಕಿಸ್ಥಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್‌ಕುಮಾರ್‌ಶೆಟ್ಟಿ ಬಣ)ದ ಕಾರ್ಯಕರ್ತರು ಸೋಮವಾರ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ನಗರ ನೆಹರು ವೃತ್ತದಲ್ಲಿ ತಾಲೂಕು ಅಧ್ಯಕ್ಷ ಬಿ.ಸಿ.ಮಂಜುನಾಥ್ ಮಾತನಾಡಿ, ಪಾಕಿಸ್ಥಾನದ ಪರವಾಗಿ ಘೋಷಣೆ ಕೂಗಿ ದೇಶದ್ರೋಹಿ ಕೆಲಸ ಮಾಡಿದ್ದಾರೆ. ಭಾರತೀಯರಾಗಿರಲು ಅವರಿಗೆ ಅರ್ಹತೆ ಇಲ್ಲ ಎಂದು ಅಮೂಲ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಗೌರವಾಧ್ಯಕ್ಷ ಹೇಮಂತಕುಮಾರ್ ಮಾತನಾಡಿ, ಪಾಕಿಸ್ಥಾನ ಜಿಂದಾಬಾದ್ ಘೋಷಣೆ ಕೂಗಿರುವವರ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಕಾರ್ಯಾಧ್ಯಕ್ಷ ತಿಪ್ಪೇಸ್ವಾಮಿ, ಉಪಾಧ್ಯಕ್ಷರಾದ ನಾಗರಾಜ, ಗಣೇಶ ಮಾತನಾಡಿದರು.
ಕಾರ್ಯಕರ್ತರಾದ ಮಧು, ಆಟೋ ರಫಿ, ವೇದಿಕೆ ಕಾರ್ಯಕರ್ತರಾದ ಮಂಜುನಾಥ್, ಸೂರಿ, ಧನಂಜಯಕುಮಾರ್, ರಘು, ಕೃಷ್ಣಮೂರ್ತಿ, ಶ್ರೀನಿವಾಸ, ರಾಜಣ್ಣ ಇದ್ದರು.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)
Get in Touch With Us info@kalpa.news Whatsapp: 9481252093















