ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ಸಿಎಎ ವಿರೋಧಿಸಿ ನವದೆಹಲಿಯಲ್ಲಿ ಆರಂಭವಾದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ 22 ಮಂದಿಯನ್ನು ಬಲಿ ಪಡೆದಿದ್ದು, ಸೇನೆಯನ್ನು ನಿಯೋಜಿಸಲಾಗಿದೆ.
ಈ ನಡುವೆಯೇ ವ್ಯವಸ್ಥಿತವಾಗಿ ನಡೆಯುತ್ತಿರುವ ಹಿಂಸಾಚಾರ ನಿಯಂತ್ರಣದ ಹೊಣೆಯನ್ನು ಭಾರತದ ಜೇಮ್ಸ್ ಬಾಂಡ್ ಎಂದೇ ಖ್ಯಾತರಾಗಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರ ಹೆಗಲಿಗೆ ಕೇಂದ್ರ ಸರ್ಕಾರ ವಹಿಸಿದೆ.
ದೆಹಲಿಯಲ್ಲಿ ಹಿಂಸಾಚಾರ ನಿಯಂತ್ರಣಕ್ಕೆ ಬಾರದೇ 22 ಮಂದಿ ಬಲಿಯಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ತುರ್ತು ಸಂಪುಟ ಸಭೆ ನಡೆಸಿದ್ದು, ಹಿಂಸಾಚಾರ ನಿಯಂತ್ರಣದ ಹೊಣೆಯನ್ನು ಧೋವಲ್ ಹೆಗಲಿಗೆ ವಹಿಸಲಾಗಿದೆ. ಈ ಸಭೆಯಲ್ಲಿ ಸ್ವತಃ ಧೋವಲ್ ಅವರೂ ಸಹ ಪಾಲ್ಗೊಂಡಿದ್ದರು.

ನಿನ್ನೆ ರಾತ್ರಿಯಷ್ಟೇ ಅಜಿತ್ ಧೋವಲ್ ಅವರು ಖುದ್ಧು ದೆಹಲಿಯ ಜಫ್ರಾಬಾದ್, ಸೀಲಂಪುರ ಸೇರಿದಂತೆ ಹಿಂಸಾಚಾರ ಪೀಡಿತ ಈಶಾನ್ಯ ದೆಹಲಿಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ತಮ್ಮ ಹೆಗಲಿಗೆ ಜವಾಬ್ದಾರಿ ಬಂದದ್ದೇ ತಡ, ದೆಹಲಿ ಪೊಲೀಸ್ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಧೋವಲ್, ಹಿಂಸಾಚಾರ ನಿಯಂತ್ರಣಕ್ಕೆ ಅಗತ್ಯವಿರುವ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ. ಶಾಂತಿ ಕಾಪಾಡಲು ಎಂತಹುದ್ದೇ ಕಠಿಣ ನಿರ್ಧಾರ ತೆಗೆದುಕೊಳ್ಳಲು ಆದೇಶಿಸಿದ್ದಾರೆ.
Get in Touch With Us info@kalpa.news Whatsapp: 9481252093

















