ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೈಂದೂರು: ಕ್ಷೇತ್ರದಾದ್ಯಂತ ಅಭಿವೃದ್ಧಿಯ ಹರಿಕಾರ ಎಂದು ಹೆಸರುವಾಸಿಯಾಗಿರುವ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು ಜನತೆ ನೀಡಿದ ಮತ್ತೊಂದು ವಾಗ್ದಾನವನ್ನು ನೆರವೇರಿಸಿದ್ದಾರೆ.
ಮರವಂತೆ ಹಾಗೂ ಕೊಡೇರಿ ಬಂದರು ಅಭಿವೃದ್ಧಿಗೆ ಈ ಭಾಗದಲ್ಲಿ ಹಲವು ವರ್ಷಗಳಿಂದ ಬೇಡಿಕೆಯಿತ್ತು. ಅಲ್ಲದೇ ಮೀನುಗಾರರ ಅಭಿವೃದ್ಧಿಗಾಗಿ ಹಣ ಮೀಸಲು ಇರಿಸುವಂತೆ ಭಾರೀ ಹಲವು ವರ್ಷಗಳಿಂದ ಮನವಿ ಮಾಡಲಾಗಿತ್ತು. ಈ ಕುರಿತಂತೆ ಭರವಸೆ ನೀಡಿದ್ದ ಶಾಸಕ ಸುಕುಮಾರ ಶೆಟ್ಟಿ ಅವರು, ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ.
ಇಂದು ಸಿಎಂ ಬಿಎಸ್’ವೈ ಮಂಡಿಸುತ್ತಿರುವ ರಾಜ್ಯ ಬಜೆಟ್’ನಲ್ಲಿ ಮರವಂತೆ ಬಂದರು ಎರಡನೇ ಹಂತದ ಕಾಮಗಾರಿ ಪೂರ್ಣಗೊಳಿಸಲು 85 ಕೋಟಿ ರೂ ಹಾಗೂ ಕೊಡೇರಿ ಬಂದರು ಅಭಿವೃದ್ಧಿಗೆ ಎರಡು ಕೋಟಿ ರೂ. ಅನುದಾನ ಹಾಗೂ ಕಿರಿ ಮಂಜೇಶ್ವರ ಮೀನುಗಾರರ ಹಿತ ಕಾಯಲು ಅನುದಾನ ಘೋಷಣೆ ಮಾಡಿದ್ದಾರೆ. ಈ ಮೂಲಕ ದಶಕಗಳ ಬೇಡಿಕೆ ಈಡೇರಿದಂತಾಗಿದೆ.
ಕ್ಷೇತ್ರದ ಅಭಿವೃದ್ಧಿಗೆ ಆನೆಬಲ ನೀಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ತಮ್ಮ ಬೆಂಬಲಕ್ಕೆ ನಿರಂತರ ಸಹಕಾರ ನೀಡುತ್ತಿರುವ ಸಂಸದ ಬಿ.ವೈ. ರಾಘವೇಂದ್ರ, ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರುಗಳಿಗೆ ಶಾಸಕ ಸುಕುಮಾರ ಶೆಟ್ಟಿ ಅವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.
Get in Touch With Us info@kalpa.news Whatsapp: 9481252093
















