ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹತ್ಯೆ ಸಂಚು ಖಂಡನೀಯ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.
ವಿಧಾನಸಭೆ ಕಲಾಪಕ್ಕೂ ಮುನ್ನ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಷ್ಟ್ರೀಯವಾದಿಗಳ ಮೇಲಿನ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ವಿಚಾರವನ್ನು ಗುಪ್ತಚರ ಇಲಾಖೆ ನೀಡಿದೆ ಎಂಬುದು ತಿಳಿದುಬಂದಿದೆ.ಈ ಬಗ್ಗೆ ಗೃಹ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡುವುದಾಗಿ ಅವರು ಹೇಳಿದ್ದಾರೆ.
(ವರದಿ: ಶ್ರೀಮತಿ ಸಂಧ್ಯಾ, ಕೃಷಿ ಸಚಿವರ ಮಾಧ್ಯಮ ಕಾರ್ಯದರ್ಶಿ)
Get in Touch With Us info@kalpa.news Whatsapp: 9481252093















