No Result
View All Result
Minister Somanna Inspects & Inaugurates Road Under Bridges in Tumkur District eliminating level Crossing gates
English Articles

Minister Somanna Inspects & Inaugurates Road Under Bridges in Tumkur District eliminating level Crossing gates

by ಕಲ್ಪ ನ್ಯೂಸ್
February 26, 2026
0

Kalpa Media House  |  Bengaluru  | Union Minister of State for Railways and Jal Shakti, V. Somanna, today inaugurated three...

Read moreDetails
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
  • Advertise With Us
  • Grievances
  • About Us
  • Contact Us
Saturday, February 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಜನರಿಕ್ ಔಷಧಿಗಳು ಕಳಪೆಯಲ್ಲ: ಬೆಲೆ ಕಡಿಮೆ. ಆದರೆ, ಗುಣಮಟ್ಟ ಮಾತ್ರ ಅತ್ಯುತ್ತಮ

ಜನೌಷಧಿಗಳ ಕುರಿತು ವಾಸ್ತವವನ್ನು ತೆರಿದಿಡುವ ಅಪರೂಪದ ಲೇಖನ: ಯಾರು ಜನೌಷಧಿ ಕೇಂದ್ರಗಳನ್ನು ತೆರೆಯಬಹುದು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 17, 2020
in Special Articles
0
ಜನರಿಕ್ ಔಷಧಿಗಳು ಕಳಪೆಯಲ್ಲ: ಬೆಲೆ ಕಡಿಮೆ. ಆದರೆ, ಗುಣಮಟ್ಟ ಮಾತ್ರ ಅತ್ಯುತ್ತಮ

Image Courtesy: Internet

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಏನಿದು ಜನರಿಕ್ ಔಷಧ? ಜನೌಷಧ?
ಜನೌಷಧಿ ಕೇಂದ್ರಗಳಲ್ಲಿ ಕಡಿಮೆ ಬೆಲೆಗೆ ದೊರಕುವ ಜನರಿಕ್ ಔಷಧಿಗಳನ್ನು ಮಾರುತ್ತಾರೆ. ಜನರಿಕ್ ಔಷಧಿಗಳನ್ನು ಮಾರುವ ಜನೌಷಧಿ ಕೇಂದ್ರಗಳನ್ನು ಹೆಚ್ಚು ಹೆಚ್ಚಾಗಿ ಸ್ಥಾಪಿಸಲು ಸರ್ಕಾರವು ಪ್ರೋತ್ಸಾಹಿಸುತ್ತಿದೆ. ಹಾಗಿದ್ದರೆ ಈ ಜನರಿಕ್ ಔಷಧಿಗಳೆಂದರೇನು? ಜನೌಷಧಿಗಳೆಂದರೇನು? ಅವುಗಳ ಬೆಲೆ ಏಕೆ ಕಡಿಮೆ? ಅವುಗಳು ಕಾರ್ಯಕ್ಷಮತೆ ಹೇಗಿರುತ್ತದೆ? ಅವುಗಳಿಗೆ ಲೈಸೆನ್ಸ್‌ ನೀಡುವವರು ಯಾರು? ಇತ್ಯಾದಿ ಹಲವು ಪ್ರಶ್ನೆಗಳಿಗೆ ಉತ್ತರ ಬೇಕಲ್ಲವೇ? ಪ್ರಯತ್ನಿಸೋಣ..

ಜನರಿಕ್ ಔಷಧವಂತೆ! ಕೆಲಸ ಮಾಡ್ತದೋ ಏನೋ? ಅಲ್ರಿ.. ಅಷ್ಟು ಕಡಿಮೆ ಬೆಲೆಗೆ ಹ್ಯಾಗ್ ಮಾರ್ತಾರೆ? ಅದ್ರಲ್ಲಿ ಔಷಧಿನೇ ಕಡಿಮೆ ಇರಬಹುದು ಅಲ್ವೆ? ಇದು ಒಂದಿಷ್ಟು ಜನರ ಅಭಿಪ್ರಾಯ.

ಜನರಿಕ್ ಔಷಧಿ ಕೆಲಸ ಮಾಡಲ್ವಂತೆ. ಅದಕ್ಕೆ ಬ್ರಾಂಡೆಡ್ ಔಷಧಿ ತರ್ಸಿ ಕೊಂಡಿದ್ದೇನೆ. ದುಡ್ಡು ಜಾಸ್ತಿ ಆದರೂ ಪರ್ವಾಗಿಲ್ಲ. ಒಟ್ನಲ್ಲಿ ಚೆನ್ನಾಗಿ ಕೆಲಸ ಮಾಡಬೇಕು. ಇದು ಕೆಲವರ ಅಭಿಪ್ರಾಯ.

ಇತ್ತೀಚೆಗಂತೂ ದುಬಾರಿ ಔಷಧಗಳು ಉತ್ತಮವಾಗಿ ಕೆಲಸ ಮಾಡುತ್ತವೆಂಬ ಪ್ಲಾಸೆಬೋ ಪರಿಣಾಮ ಜನರ ತಲೆ ಹೊಕ್ಕುಬಿಟ್ಟಿದೆ. ಅದಕ್ಕೆ ಡಾಕ್ಟ್ರೇ.. ಔಷಧಿ ದುಬಾರಿಯಾದರೂ ಪರವಾಗಿಲ್ಲ. ರೋಗ ಬೇಗ ಗುಣವಾಗಬೇಕು. ದುಬಾರಿ ಔಷಧಿ ಬರೆದುಕೊಡಿ ಎನ್ನುವವರ ಸಂಖ್ಯೆಗೇನೂ ಕಡಿಮೆ ಇಲ್ಲ.

ಜನೌಷಧಿ ಕೇಂದ್ರಗಳನ್ನು ಹೆಚ್ಚು ಹೆಚ್ಚಾಗಿ ಸ್ಥಾಪಿಸಲು ಸರ್ಕಾರಗಳೇ ಪ್ರೋತ್ಸಾಹಿಸುತ್ತಿದ್ದಾವೆ. ಜನೌಷಧಿ ಕೇಂದ್ರಗಳಲ್ಲಿ ಕಡಿಮೆ ಬೆಲೆಗೆ ದೊರಕುವ ಜನರಿಕ್ ಔಷಧಿಗಳನ್ನು ಮಾರುತ್ತಾರೆ. ಹಾಗಿದ್ದರೆ ಈ ಜನರಿಕ್ ಔಷಧಿಗಳೆಂದರೇನು? ಜನೌಷಧಿಗಳೆಂದರೇನು? ಅವುಗಳ ಬೆಲೆ ಏಕೆ ಕಡಿಮೆ? ಅವುಗಳು ಕಾರ್ಯಕ್ಷಮತೆ ಹೇಗಿರುತ್ತದೆ? ಅವುಗಳಿಗೆ ಲೈಸೆನ್ಸ್‌ ನೀಡುವವರು ಯಾರು? ಇತ್ಯಾದಿ ಹಲವು ಪ್ರಶ್ನೆಗಳಿಗೆ ಉತ್ತರ ಬೇಕಲ್ಲವೇ? ಪ್ರಯತ್ನಿಸೋಣ…

ಉದಾಹರಣೆಗೆ ಕ್ರೋಸಿನ್ ಇದು ಬ್ರಾಂಡೆಡ್ ಹೆಸರು. ಇದು ಜಿಎಸ್’ಕೆ ಈ ಕಂಪನಿಯ ಬ್ರಾಂಡೆಡ್ ಉತ್ಪನ್ನವಾದರೆ ಪ್ಯಾರಸೆಟಮಾಲ್ ಇದು ಕ್ರೋಸಿನ್ನಲ್ಲಿರುವ ಜನರಿಕ್ ಔಷಧಿಯ ಹೆಸರು. ಜನರಿಕ್ ಔಷಧಿಯಾದ ಪ್ಯಾರಾಸೆಟಮಾಲ್ ಅನ್ನು ಅನೇಕ ಕಂಪನಿಗಳು ಅನೇಕ ಬ್ರಾಂಡೆಡ್ ಹೆಸರಿನಲ್ಲಿಯೂ ತಯಾರಿಸುತ್ತವೆ. ಜನರಿಕ್ ಪ್ಯಾರಸೆಟಮಾಲ್ 15 ಗುಳಿಗೆಗೆ ರೂ. 5 ಇದ್ದರೆ, ಕ್ರೋಸಿನ್ 15 ಗುಳಿಗೆಗಳಿಗೆ ರೂ. 30.24 ಇರುತ್ತದೆ. ಅಂದರೆ ಬೆಲೆಯು ಬ್ರಾಂಡೆಡ್ ಔಷಧಿಗೆ ಕನಿಷ್ಟ 6 ಪಟ್ಟು ಜಾಸ್ತಿ!! ಎರಡರ ಪರಿಣಾಮವೂ ಒಂದೇ. ಇದು ಬಹುತೇಕ ಜನರಿಗೆ ಗೊತ್ತಿರುವುದಿಲ್ಲ.

ಸಾಮಾನ್ಯವಾಗಿ ಒಂದು ಔಷಧ ಕಂಪನಿ ಹೊಸ ಔಷಧ’ ಕಂಡುಹಿಡಿಯಿತೆಂದರೆ ಇಂತಿಷ್ಟು ವರ್ಷಗಳ ಕಾಲ ಅದರ ಸ್ವಾಮ್ಯತೆ ಅಥವಾ ಹಕ್ಕು ಹೊಂದಿರುತ್ತದೆ. ಅಂದರೆ ಈ ಪೇಟೆಂಟ್ ಅವಧಿಯಲ್ಲಿ ಬೇರೆ ಯಾವ ಔಷಧ ಕಂಪನಿಗಳೂ ಸಹ ಈ ಹೊಸ ಔಷಧವನ್ನು ಬಳಸಿ ಹೊಸ ಕಂಪನಿ ಹೆಸರಿನೊಂದಿಗೆ ಮಾರುವಂತಿಲ್ಲ. ಪೇಟೆಂಟ್ ಅವಧಿ ಮುಗಿದ ನಂತರ ಯಾವ ಕಂಪನಿ ಬೇಕಾದರೂ ಈ ಔಷಧವನ್ನು ಸಿದ್ದಪಡಿಸಿ ಹೊಸ ಬ್ರಾಂಡ್ ಹೆಸರಿನಿಂದ ಮಾರುಕಟ್ಟೆಯಲ್ಲಿ ಮುಕ್ತವಾಗಿ ಮಾರಬಹುದು. ಇದಕ್ಕೆ ಮೂಲ ಕಂಪನಿ/ಪೇಟೆಂಟ್ ಪಡೆದಿದ್ದ ಕಂಪನಿಯ ಪರವಾನಗಿ ಬೇಕಾಗಿರುವುದಿಲ್ಲ.

ರಾಸಾಯನಿಕ ಹೆಸರು, ಜನರಿಕ್ ಹೆಸರು (ಮೂಲ ಹೆಸರು) ಮತ್ತು ಬ್ರಾಂಡೆಡ್ ಹೆಸರು/ಟ್ರೇಡ್ ನೇಮ್/ಪ್ರೊಪ್ರೈಟರಿ ಹೆಸರುಗಳಿಂದ ಒಂದು ಔಷಧವನ್ನು ಗುರುತಿಸಬಹುದು. ಇವುಗಳಲ್ಲಿ ಔಷಧದ ರಾಸಾಯನಿಕ ಹೆಸರು ಮತ್ತು ಜನರಿಕ್ ಹೆಸರುಗಳು ಎಂದಿಗೂ ಬದಲಾಗುವುದಿಲ್ಲ. ರಾಸಾಯನಿಕ ಹೆಸರುಗಳನ್ನು ಓದುವುದು ಮತ್ತು ನೆನಪಿಟ್ಟುಕೊಳ್ಳುವುದು ಸಾಮಾನ್ಯವಾಗಿ ಕಷ್ಟ ಸಾದ್ಯ, ಆದರೆ ಜನರಿಕ್ ಹೆಸರುಗಳನ್ನು ಸುಲಭವಾಗಿ ಓದಬಹುದು ಮತ್ತು ನೆನಪಿಟ್ಟುಕೊಳ್ಳಬಹುದು.

ಬ್ರಾಂಡೆಡ್ ಔಷಧಗಳಿಗೆ ಪರ್ಯಾಯವಾಗಿ ಬಳಸುವ ಉದ್ದೇಶದಿಂದ ಸ್ವಾಮ್ಯತೆ ಅಥವಾ ಪೇಟೆಂಟ್ ಅವಧಿಯ ನಂತರ ಮಾರುಕಟ್ಟೆಯಲ್ಲಿ ಔಷಧದ ಮೂಲ ಹೆಸರಿನಲ್ಲಿ ಲಭ್ಯವಿರುವ ಔಷಧಗಳಿಗೆ ಜನರಿಕ್ ಔಷಧಗಳು ಎನ್ನುತ್ತಾರೆ.

ಸಾರ್ವಜನಿಕರಿಗೆ ಇರುವಂತೆ ಬಹುತೇಕ ವೈದ್ಯರಿಗೆ ಮತ್ತು ಪಶುವೈದ್ಯರಿಗೂ ಸಹ ಜನರಿಕ್ ಔಷಧಿಗಳ ಬಗ್ಗೆ ಈ ಕೆಳಗಿನ ಸಂಶಯಗಳಿವೆ.

1. ಜನರಿಕ್ ಔಷಧಗಳು ಏಕೆ ಅಗ್ಗ?
2. ಬ್ರಾಂಡೆಡ್ ಔಷಧಿಗಳಿಗೆ ಲೈಸನ್ಸ್‌ ಕೊಡುವಾಗ ಅನುಸರಿವಷ್ಟು ಕಠಿಣ ಕ್ರಮವನ್ನು ಜನರಿಕ್ ಔಷಧಿಗಳಿಗೆ ಅನುಮತಿ ನೀಡುವಾಗ ಅನುಸರಿಸುವುದಿಲ್ಲ.
3. ಜನರಿಕ್ ಔಷಧಿಗಳು ಬ್ರಾಂಡೆಡ್ ಔಷಧಗಳಷ್ಟು ಕಾರ್ಯಕ್ಷಮತೆ ಹೊಂದಿಲ್ಲ.
4. ಜನರಿಕ್ ಔಷಧಗಳು ಬ್ರಾಂಡೆಡ್ ಔಷಧಗಳಂತೆ ಉತ್ತಮವಾಗಿ ಉತ್ಪಾದನಾ ಗುಣಮಟ್ಟ ಹೊಂದಿಲ್ಲ.
5. ಜನರಿಕ್ ಔಷಧಗಳ ಗುಣಮತ್ತ, ಪರಿಣಾಮ, ಅಡ್ಡ ಪರಿಣಾಮ ಇವುಗಳನ್ನು ತಪಾಸಣೆ ಮಾಡಲು ಉತ್ತಮ ಸಂಸ್ಥೆಗಳಿಲ್ಲ.
6. ಇವುಗಳ ಬೆಲೆ ಕಡಿಮೆ. ಕಾರಣ ಗುಣಮಟ್ಟದಲ್ಲಿ ರಾಜಿ ಮಾಡಿಕೊಂಡಿರಬಹುದು.
7. ಜನರಿಕ್ ಔಷಧಿಗಳಿಗೆ ಅಡ್ಡ ಪರಿಣಾಮಗಳಾದರೆ ತಯಾರಕರು ಹೊಣೆಗಾರಿಕೆ ವಹಿಸಿಕೊಳ್ಳುವುದಿಲ್ಲ.

ಈ ಪ್ರಶ್ನೆಗಳಿಗೆಲ್ಲ ಕೆಳಗೆ ಉತ್ತರವಿದೆ
ಜನರಿಕ್ ಔಷಧಗಳೇಕೆ ಬ್ರಾಂಡೆಡ್ ಔಷಧಗಳಿಗಿಂತ ಅಗ್ಗ?
ಮಾರುಕಟ್ಟೆಗೆ ಹೊಸ ಔಷಧಿ ಲಗ್ಗೆ ಇಡುವ ಮುನ್ನ ಅಮೆರಿಕಾ ಸರ್ಕಾರದ ಅಧೀನದ ಸಂಸ್ಥೆಯಾದ ಆಹಾರ ಮತ್ತು ಔಷಧ ಪರವಾನಗಿ ಪ್ರಾಧಿಕಾರದ (ಎಫ್‌ಡಿಎ) ಕಠಿಣ ಕಣ್ಗಾವಲಿನಲ್ಲಿ ಪುನರಾವಲೋಕನಗೊಂಡಿರುತ್ತದೆ. ಕಂಪನಿಗಳು ಹೊಸ ಔಷಧಗಳನ್ನು ಕಂಡುಹಿಡಿಯುವಲ್ಲಿ ಸಾಕಷ್ಟು ಸಮಯ (ಸುಮಾರು 6-12 ವರ್ಷಗಳು) ಮತ್ತು ಸುಮಾರು 200 ಬಿಲಿಯನ್ ಹಣವನ್ನು ವ್ಯಯಿಸಿರುತ್ತವೆ. ಎಫ್’ಡಿಎಯು ಈ ಕಂಪಗಳಿಗೆ ತಾವು ತೊಡಗಿಸಿದ ಹಣವನ್ನು ಹಿಂಪಡೆಯಲು ನೆರವಾಗುವಂತೆ ಪೇಟೆಂಟ್ ಅವಧಿಯನ್ನು ನೀಡಿ ಮಾರುಕಟ್ಟೆಯಲ್ಲಿ ಏಕಸ್ವಾಮ್ಯವನ್ನು ಸಾಧಿಸಲು ನೆರವಾಗುತ್ತದೆ. ಹಾಗಾಗಿ ಬ್ರಾಂಡೆಡ್ ಔಷಧಗಳು ತುಸು ತುಟ್ಟಿ. ಆದರೆ ಜನರಿಕ್ ಔಷಧಗಳು ಹಾಗಲ್ಲ, ಪೇಟೆಂಟ್ ಅವಧಿಯ ನಂತರವೇ ಜನರಿಕ್ ಔಷಧಿಗಳನ್ನು ಸಿದ್ದಪಡಿಸಲು ಎಫ್‌ಡಿಎಯು ಪರವಾನಗಿ ನೀಡುವುದರಿಂದ, ಮತ್ತೊಮ್ಮೆ ಪ್ರಾಣಿಗಳ ಮತ್ತು ಮಾನವನ ಮೇಲೆ ಪ್ರಯೋಗ ಮಾಡಿ ನೋಡುವ ಅವಶ್ಯಕತೆ ಇರುವುದಿಲ್ಲ. ಹಾಗಾಗಿ ಜನರಿಕ್ ಔಷಧಿಗಳು ಅಗ್ಗ.

ಬಹುಮುಖ್ಯವಾಗಿ ಯಾವುದೇ ಕಂಪನಿ ತಯಾರಿಸಿದರೂ ಔಷಧದ ಮೂಲ ಹೆಸರಿನಲ್ಲೆಥ (ಜನರಿಕ್ ಹೆಸರಿನಲ್ಲಿ) ಮಾರಾಟ ಮಾಡಬೇಕಾಗಿರುವುದರಿಂದ ಮಾರುಕಟ್ಟೆಯಲ್ಲಿ ಕಂಪನಿ ದರ ಪೈಪೋಟಿಗೆ ಇಳಿದುಬಿಡುತ್ತದೆ. ಈ ಕಾರಣಗಳಿಂದ ಜನರಿಕ್ ಔಷಧಗಳು ಬ್ರಾಂಡೆಡ್ ಔಷಧಗಳಿಗಿಂತ ಶೇ. 70-85ರಷ್ಟು ಕಡಿಮೆ ದರದಲ್ಲಿ ಲಭ್ಯವಾಗುತ್ತವೆ.

ಜನರಿಕ್ ಔಷಧಗಳು ಹೇಗೆ ಅನುಮೋದನೆ ಪಡೆಯುತ್ತವೆ?
ಯಾವುದೇ ಕಂಪನಿ ಹೊಸದಾಗಿ ಜನರಿಕ್ ಔಷಧಗಳನ್ನು ಸಿದ್ದಪಡಿಸಿ ಮಾರುಕಟ್ಟೆಗೆ ತರುವ ಮುನ್ನ ಹೊಸ ಅರ್ಜಿಯನ್ನು ಎಫ್’ಡಿಎಗೆ ಸಲ್ಲಿಸಿರುತ್ತದೆ. ಆಗ ಎಪ್‌ಡಿಎ ವಿವಿಧ ಮೂಲಭೂತ ಪರೀಕ್ಷೆಗಳನ್ನು ನಡೆಸಿದ ನಂತರವೇ ಅನುಮೋದನೆ ನೀಡುತ್ತದೆ.

ಔಷಧದ ಅಡ್ಡಪರಿಣಾಮ ಮತ್ತು ಸುರಕ್ಷತೆಯ ತಪಾಸಣೆ ನಡೆಯುತ್ತದೆಯೇ?
ಹೌದು. ಜನರಿಕ್ ಅಥವಾ ಬೇರೆ ಯಾವುದೇ ಔಷಧ ಇರಲಿ, ಅವು ಎಲ್ಲಿಯವರೆಗೆ ಮಾರುಕಟ್ಟೆಯಲ್ಲಿ ಲಭ್ಯವಿರುತ್ತವೆಯೋ ಅಲ್ಲಿಯವರೆಗೆ ಎಫ್’ಡಿಎಯ ಕಣ್ಗಾವಲಿನಲ್ಲಿರುತ್ತವೆ. ಔಷಧಗಳು ಸಿದ್ದವಾಗಿ ಬಳಕೆದಾರರಿಗೆ ಲಭ್ಯವಾಗುವ ತನಕದ ಎಲ್ಲಾ ಹಂತದಲ್ಲೂ ಎಫ್’ಡಿಎಯು ಕಾಲಕಾಲಕ್ಕೆ ನಿರಂತರವಾಗಿ ಮೇಲ್ವಿಚಾರಣೆ ಮಾಡುವ ಮೂಲಕ ಔಷಧಗಳ ಸುರಕ್ಷತೆ ಮತ್ತು ಗುಣಮಟ್ಟವನ್ನು ದೃಢಪಡಿಸುತ್ತದೆ. ಚಿಕಿತ್ಸಾ ವೈಫಲ್ಯ ಅಥವಾ ವೈಪರೀತ್ಯಗಳು ಕಂಡುಬಂದಲ್ಲಿ, ಸಾರ್ವಜನಿಕರಿಗೆ ಹಾಗೂ ಆರೋಗ್ಯ ಕ್ಷೇತ್ರ ವೃತ್ತಿಪರರಿಗೆ ಸೂಚನೆ/ಸಲಹೆ/ಶಿಫಾರಸ್ಸುಗಳನ್ನು ನೀಡುವ ಹೊಣೆಗಾರಿಕೆಯನ್ನು ಎಫ್’ಡಿಎ ಹೊಂದಿದೆ.

ಭಾರತದಲ್ಲಿ ಜನರಿಕ್ ಔಷಧಗಳ ಪರಿಸ್ಥಿತಿ ಏನು?
ವಿಶ್ವ ಆರೋಗ್ಯ ಸಂಸ್ಥೆಯ ಅಂದಾಜಿನ ಪ್ರಕಾರ ಜಗತ್ತಿನ ಶೇ.30ರಷ್ಟು ಜನರಿಗೆ ಅವಶ್ಯಕ ಔಷಧಗಳು ಕೈಗೆಟುಕುತ್ತಿಲ್ಲ. ಇದರ ಪ್ರಮಾಣ ಆಫ್ರಿಕಾ ಮತ್ತು ಏಷಿಯಾದಲ್ಲಿ ಶೇ.50ರಷ್ಟು. ಭಾರತದಲ್ಲಿ ಒಟ್ಟು ಉತ್ಪನ್ನದ ಶೇ. 1.2 ರಷ್ಟನ್ನು ಭಾರತೀಯರು ತಮ್ಮ ಆರೋಗ್ಯದ ಮೇಲೆ ಖರ್ಚು ಮಾಡುತ್ತಾರೆ. ವಾರ್ಷಿಕ ವೈದ್ಯಕೀಯ ವೆಚ್ಚವನ್ನು ತಗ್ಗಿಸುವ ಉದ್ದೇಶದಿಂದ ಜನರಿಕ್ ಔಷಧಗಳನ್ನು ಭಾರತದಲ್ಲಿ ಪರಿಚಯಿಸಲಾಗಿದೆ.

ಪರೀಕ್ಷೆ ಮತ್ತು ಮಾಪನಾಂಕ ನಿರ್ಣಯ ಪ್ರಯೋಗಾಲಯಗಳಿಗಾಗಿ ರಾಷ್ಟ್ರೀಯ ಮಾನ್ಯತಾ ಮಂಡಳಿ (ಎನ್’ಎಬಿಎಲ್) ಸರ್ಕಾರಿ ಮತ್ತು ಖಾಸಗಿ ತಯಾರಕರಿಂದ ಆಯ್ದ ಬ್ಯಾಚಿನ ಔಷಧಗಳನ್ನು ತಂದು ವಿವಿಧ ಪರೀಕ್ಷೆಗೆ ಒಳಪಡಿಸುವ ಮೂಲಕ ಗುಣಮಟ್ಟ, ಸುರಕ್ಷತೆ ಮತ್ತು ಪರಿಣಾಮಕಾರಿತ್ವವನ್ನು ದೃಢಪಡಿಸಿಕೊಳ್ಳುತ್ತದೆ.

ಕೇಂದ್ರ ಸರ್ಕಾರದಿಂದ ಸಹಾಯಧನ ಪಡೆದ ಸರ್ಕಾರೇತರ ಅಥವಾ ಲಾಭ ನಿರಪೇಕ್ಷಿತ ಸಂಘಟನೆಗಳೇ ಸಾಮಾನ್ಯವಾಗಿ ಭಾರತದಲ್ಲಿ ಜನರಿಕ್ ಔಷಧ ತಯಾರಕರು. ಜನರಿಕ್ ಔಷಧಗಳಲ್ಲಿ ದರ ವ್ಯತ್ಯಾಸಗಳಿದ್ದರೂ ಅವುಗಳ ಪರಿಣಾಮಕಾರಿತ್ವವನ್ನು ಹೋಲಿಕೆ ಮಾಡಬಹುದು.

ಜನರಿಕ್ ಮತ್ತು ಬ್ರಾಂಡೆಡ್ ಔಷಧಗಳ ಪರಿಣಾಮಕಾರಿತ್ವದಲ್ಲಿ ವ್ಯತ್ಯಾಸವಿಲ್ಲ ಎಂಬುದು ಸಾಬೀತಾಗಿದ್ದರೂ ಸಹ ಬಹಳಷ್ಟು ವೈದ್ಯರು ಹೆಸರಾಂತ ಕಂಪನಿಗಳ ಔಷಧಗಳನ್ನೇ ಬರೆದುಕೊಡುತ್ತಾರೆ. ಆದರೆ ಅವರಿಗೆ ಕಡಿಮೆ ಹೆಸರಿರುವ ಕಂಪನಿಗಳು ಜನರಿಕ ಔಷಧಗಳನ್ನು ತಯಾರಿಸುತ್ತವೆ ಎಂಬುದೇ ತಿಳಿದಿರುವುದಿಲ್ಲ!

ಔಷಧ ತಯಾರಿಕೆಯಲ್ಲಿ ಬಳಸುವ ಉಪವಸ್ತುಗಳಿಂದ ಅಲ್ಪ ಸ್ವಲ್ಪ ಗುಣಮಟ್ಟದಲ್ಲಿ ವ್ಯತ್ಯಾಸವಾಗಬಹುದೇ ಹೊರತು ಮೂಲ ಔಷಧಿಯಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎನ್ನುತ್ತಾರೆ ಸಂಶೋಧಕರು. ಕೆಲವು ಔಷಧಿಗಳ ಗುಣಮಟ್ಟ ಸ್ವಲ್ಪ ಕಡಿಮೆ ಎಂಬ ಅಪವಾದ ಬಿಟ್ಟರೆ ಬಹುತೇಕ ಜನರಿಕ್ ಔಷಧಿಗಳು ಬ್ರಾಂಡೆಡ್ ಔಷಧಿಗಳಿಗಿಂತ ಗುಣ ಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಂಡಿರುವುದಿಲ್ಲ.

ಜಾನುವಾರುಗಳಲ್ಲಿಯೂ ಜನರಿಕ್ ಔಷಧಿ ಇದೆಯೇ?
ಇದೆ. ಜನರಿಕ್ ಔಷಧಿಗಳು ಜಾನುವಾರು ಚಿಕಿತ್ಸೆಯಲ್ಲೂ ಇವೆ. ಆದರೆ ಭಾರತದಲ್ಲಿ ಇನ್ನೂ ಇದರ ಜನೌಷಧಿ ಕೇಂದ್ರಗಳು ಇಲ್ಲ. ಪಶುವೈದ್ಯರೂ ಸಹ ಈ ಔಷಧಿಗಳಿಗೆ ಅಷ್ಟು ಪರಿಣಾಮ ಹೊಂದಿಲ್ಲ ಎಂಬ ಭಾವನೆಯಿಂದ ಇವುಗಳನ್ನು ಬರೆದುಕೊಡುವುದಿಲ್ಲ ಎನ್ನುತ್ತದೆ ಸಮೀಕ್ಷೆ. ಆದರೆ ಜಾನುವಾರುಗಳ ಜನರಿಕ್ ಔಷಧಿಗಳಿಗೂ ಸಹ ಅಮೆರಿಕಾದಲ್ಲಿ ಅತ್ಯಂತ ಕಠಿಣ ತಪಾಸಣೆಗಳ ನಂತರವೇ ರಹದಾರಿ ನೀಡುತ್ತದೆ. ಭಾರತದಲ್ಲಿಯೂ ಸಹ ಪಶು ಜನೌಷಧಿ ಕೇಂದ್ರಗಳು ಬಂದರ ಜಾನುವಾರುಗಳ ಔಷಧಿ ಕಡಿಮೆ ದರದಲ್ಲಿ ದೊರಕಬಹುದು.

ಜನೌಷಧಿ ಕೇಂದ್ರಗಳೆಂದರೇನು?
ಭಾರತ ಸರ್ಕಾರವು ಜನರಿಕ್ ಔಷಧಿಗಳು ಜನಸಾಮಾನ್ಯರಿಗೆ ಕಡಿಮೆ ಬೆಲೆಗೆ ದೊರೆಯುವಂತೆ ಮಾಡಿದ ವ್ಯವಸ್ಥೆಯೇ ಜನೌಷಧಿ ಕೇಂದ್ರಗಳು. ಇಲ್ಲಿ ದೊರೆಯುವ ಜನರಿಕ್ ಔಷಧಿಗಳು ಬ್ರಾಂಡೆಡ್ ಔಷಧಿಗಳಷ್ಟೇ ಪರಿಣಾಮಕಾರಿಯಾಗಿರಬೇಕು. ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳು ಭಾರತ ಸರ್ಕಾರದ ಔಷಧ ಇಲಾಖೆಯ ಸುಪರ್ಧಿಯಲ್ಲಿ ನಿಯಂತ್ರಣದಲ್ಲಿವೆ. ಬ್ಯೂರೋ ಆಫ್ ಫಾರ್ಮಾ ಪಬ್ಲಿಕ್ ಸೆಕ್ಟರ್ ಅಂಡರ್ಟೇಕಿಂಗ್ಸ್‌ ಆಫ್ ಇಂಡಿಯಾ ಇದು ಜನೌಷಧಿಗಳ, ತಯಾರಿಕೆ, ಸಾಗಣೆ ಮತ್ತು ಗುಣಮಟ್ಟದ ಹೊಣೆ ಹೊತ್ತಿದೆ.

1. ಪ್ರತಿ ಔಷಧಿ ಬ್ಯಾಚಿನ ಔಷಧಿಗಳ ಗುಣಮಟ್ಟವು ಎನ್’ಎಬಿಎಲ್ ಪ್ರಯೋಗ ಶಾಲೆಗಳಿಂದ ದೃಢಪಟ್ಟಿರಬೇಕು.
2. ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳು ದೃಢೀಕರಿಸಲ್ಪಟ್ಟ ಸಂಸ್ಥೆಗಳಿಂದ ಮಾತ್ರ ಔಷಧ ಖರೀದಿಸಬೇಕು.
ಈ ವರೆಗೆ ಸುಮಾರು 4700 ಕ್ಕಿಂತ ಜಾಸ್ತಿ ಜನೌಷಧ ಕೇಂದ್ರಗಳು ದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದು ಈ ವರ್ಷದ ಆಯವ್ಯಯದಲ್ಲಿ ಇನ್ನೂ ಜಾಸ್ತಿ ಕೇಂದ್ರಗಳನ್ನು ತೆರೆಯಲು ಭಾರತ ಸರ್ಕಾರ ಉದ್ದೇಶಿಸಿದೆ.

ಯಾರು ಜನೌಷಧಿ ಕೇಂದ್ರಗಳನ್ನು ತೆರೆಯಬಹುದು?
ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದ ಜನಕಲ್ಯಾಣ ಕಾರ್ಯಕ್ರಮದಲ್ಲಿ ಕನಿಷ್ಟ 3 ವರ್ಷ ಅನುಭವವಿರುವ, ಸರ್ಕಾರೇತರ ಸಂಸ್ಥೆಗಳು, ಸಹಕಾರಿ ಸಂಘಗಳು ಸರ್ಕಾರಿ ಸಂಸ್ಥೆಗಳ ಆವರಣದಲ್ಲಿ ಉಚಿತವಾಗಿ ನೀಡಲ್ಪಡುವ ಸ್ಥಳದಲ್ಲಿ ಜನೌಷಧಿ ಕೇಂದ್ರಗಳನ್ನು ತೆರೆಯಬಹುದು. ಅಲ್ಲದೇ ಪಾರ್ಮಾ ಪದವೀದರರು ಸೇರಿದಂತೆ ಯಾವುದೇ ನಿರುದ್ಯೋಗಿ ಪದವೀದರರು ಅವಶ್ಯಕ ಸ್ಥಳ, ಕನಿಷ್ಟ ಬಂಡವಾಳ, ಶೀತಲಿಕರಣ ಯಂತ್ರ, ಗೋದಾಮು, ಔಷಧಿ ಅಂಗಡಿ ತೆರೆಯಲು ಮೂಲಭೂತ ಸೌಲಭ್ಯ ಮತ್ತಿತರ ರಹದಾರಿ ಹೊಂದಿದ್ದರೆ ಜನೌಷಧಿ ಕೇಂದ್ರಗಳನ್ನು ತೆರೆಯಬಹುದು. ಪ್ರತಿ ಔಷಧಿಯ ಮೇಲೆ ಶೇ. 20 ರಷ್ಟು ಲಾಭ ದೊರೆಯುವುದು. ಸರ್ಕಾರದಿಂದ ರೂ.1.5 ಲಕ್ಷದ ವರೆಗೆ ಸಹಾಯವೂ ಸಹ ದೊರೆಯುವುದು.

ಹೊಸ ಔಷಧಿಗಳು ಮಾರುಕಟ್ಟೆಗೆ ಬಂದಾಗ ಅವುಗಳ ಕಂಪನಿಯವರು ಹಾಕಿದ ಬಂಡವಾಳ ಮತ್ತು ಲಾಭವನ್ನು ಹಿಂದಿರುಗಿ ಪಡೆಯಲು ಜಾಸ್ತಿ ದುಬಾರಿ ಬೆಲೆಗೆ ಮಾರುವುದು ಸಹಜ. ಅವುಗಳನ್ನು ಖರೀದಿಸುವುದು ಅನಿವಾರ್ಯ ಸಹ. ಆದರೆ ಪೇಟೆಂಟ್ ಅವಧಿ ಮುಗಿದು ಔಷಧಿಯು ಜನರಿಕ್ ರೂಪದಲ್ಲಿ ದೊರೆಯತೊಡಗಿದಾಗ ಅವುಗಳನ್ನೇ ಖರೀದಿಸುವುದು ಒಳ್ಳೆಯದಲ್ಲವೇ?

ಜನರಿಕ್ ಔಷಧಗಳು ಚಿಕಿತ್ಸಾ ವೆಚ್ಚವನ್ನು ಕಡಿಮೆ ಮಾಡಲೆಂದೇ ಬಂದವುಗಳು. ವ್ಯವಸ್ಥೆಯಲ್ಲಿ ಸಣ್ಣ ಪುಟ್ಟ ದೋಷಗಳಿರಬಹುದು. ಹೀಗೆಂದ ಮಾತ್ರಕ್ಕೆ ಅವುಗಳನ್ನೆಲ್ಲಾ ಸಂಶಯ ದೃಷ್ಟಿಯಿಂದ ನೋಡುವುದು ಒಳಿತಲ್ಲ. ರಾಷ್ಟ್ರೀಯ ವೈದ್ಯಕೀಯ ಆಯೋಗ (ಹಿಂದಿನ ಭಾರತೀಯ ವೈದ್ಯಕೀಯ ಮಂಡಳಿ) ಸಹ ವೈದ್ಯರು ಜನರಿಕ್ ಔಷಧಿಗಳನ್ನೇ ಬರದು ಕೊಡಬೇಕು ಎಂಬ ನಿಯಮ ಮಾಡಿದೆ.ಇದೇ ನಿಯಮವನ್ನು ಭಾರತೀಯ ಪಶುವೈದ್ಯಕೀಯ ಪರಿಷತ್ತು ಸಹ ಅನುಕರಿಸಬಹುದು.

ಬಹುತೇಕ ಜನ ಸಾಮಾನ್ಯರು ಮತ್ತು ವೈದ್ಯರು ಬಳಸಿಲು ಪ್ರಾರಂಭಿಸಿದ ಮೇಲೆ ಮಾತ್ರ ಜನರಿಕ್ ಔಷಧಿಗಳಿಗೆ ಒಂದು ಉತ್ತಮ ಕಾಲ ಬರಬಹುದು.


Get in Touch With Us info@kalpa.news Whatsapp: 9481252093

Tags: Dr. N.B. SridharGeneric medicineIndian Medical CouncilJanushadhi CenterKannadaNewsWebsiteLatestNewsKannadaMedicineWorld Health Organizationಔಷಧಜನರಿಕ್ ಔಷಧಜನೌಷಧಿ ಕೇಂದ್ರಡಾ.ಎನ್.ಬಿ. ಶ್ರೀಧರ್ಭಾರತ ಸರ್ಕಾರಭಾರತೀಯ ವೈದ್ಯಕೀಯ ಮಂಡಳಿಮಾರುಕಟ್ಟೆವಿಶ್ವ ಆರೋಗ್ಯ ಸಂಸ್ಥೆ
Share224Tweet123Send
Previous Post

ಯಾವ ಜನುಮದ ಮೈತ್ರಿಯೋ…! ಅವರು ಮನೆಯಲ್ಲಿ ನಮ್ಮವರು, ಕಾಲೇಜಿನಲ್ಲಿ ನನ್ನ ಶಿಸ್ತಿನ ಮೇಸ್ಟ್ರು

Next Post

ಬ್ರಾಹ್ಮಿ ಎಲೆಯ ಸತ್ವ ತಿಳಿದರೆ ಒಂದು ದಿನವೂ ನೀವದನ್ನು ಉಪಯೋಗಿಸದೇ ಇರುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬ್ರಾಹ್ಮಿ ಎಲೆಯ ಸತ್ವ ತಿಳಿದರೆ ಒಂದು ದಿನವೂ ನೀವದನ್ನು ಉಪಯೋಗಿಸದೇ ಇರುವುದಿಲ್ಲ

ಬ್ರಾಹ್ಮಿ ಎಲೆಯ ಸತ್ವ ತಿಳಿದರೆ ಒಂದು ದಿನವೂ ನೀವದನ್ನು ಉಪಯೋಗಿಸದೇ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

February 28, 2026
ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

February 28, 2026
ಶೀಘ್ರದಲ್ಲೇ ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರ ಪ್ರಾರಂಭ: ಕೇಂದ್ರ ಸಚಿವ ಸೋಮಣ್ಣ

ಶೀಘ್ರದಲ್ಲೇ ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರ ಪ್ರಾರಂಭ: ಕೇಂದ್ರ ಸಚಿವ ಸೋಮಣ್ಣ

February 28, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಮಾರ್ಚ್ 1 ರಂದು ಬೆಂಗಳೂರಿನಿಂದ ಮುಂಬೈಗೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ

February 28, 2026
ಸೊರಬ | ಚಂದ್ರಗುತ್ತಿಯಲ್ಲಿ ಅಪೂರ್ವ ಶಾಸನ ಪತ್ತೆ

ಸೊರಬ | ಚಂದ್ರಗುತ್ತಿಯಲ್ಲಿ ಅಪೂರ್ವ ಶಾಸನ ಪತ್ತೆ

February 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL